25.5 C
Bangalore
Monday, December 16, 2019

ಶತ್ರು ದಾಳಿಗೆ ಒಳಗಾಗಿ ಹಾನಿಗೊಂಡ ಯುದ್ಧವಿಮಾನದಿಂದ ಸುರಕ್ಷಿತವಾಗಿ ಇಳಿಯುವುದು 2ನೇ ಹುಟ್ಟು ಇದ್ದಂತೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ನವದೆಹಲಿ: ಭಾರತದ ಗಡಿಯೊಳಗೆ ಪ್ರವೇಶಿಸಿ ದಾಳಿ ನಡೆಸಲು ಉದ್ದೇಶಿಸಿದ್ದ ಪಾಕಿಸ್ತಾನದ ಎಫ್​-16 ಯುದ್ಧವಿಮಾನಗಳನ್ನು ಬೆನ್ನಟ್ಟಿ, ಒಂದು ವಿಮಾನವನ್ನು ಹೊಡೆದುರುಳಿಸಿ, ದಾಳಿಗೆ ಸಿಲುಕಿ ಹಾನಿಗೊಂಡ ಮಿಗ್​ 21 ಬೈಸನ್​ ಯುದ್ಧವಿಮಾನದಿಂದ ಹೊರಜಿಗಿದು ಸುರಕ್ಷಿತವಾಗಿ ಕೆಳಗಿಳಿದ ಭಾರತೀಯ ವಾಯುಪಡೆಯ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಬಗ್ಗೆ ದೇಶದೆಲ್ಲೆಡೆ ಮೆಚ್ಚುಗೆಯ ಮಾತು ಕೇಳಿ ಬರುತ್ತಿದೆ. ಆದರೆ, ಹೀಗೆ ಶತ್ರು ದಾಳಿಗೆ ಒಳಗಾಗಿ ಹಾನಿಗೊಂಡ ಯುದ್ಧವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಯುವುದು 2ನೇ ಹುಟ್ಟು ಇದ್ದಂತೆ ಎಂಬ ಮಾತು ಭಾರತೀಯ ವಾಯುಪಡೆಯಲ್ಲಿ ಜನಜನಿತವಾಗಿರುವ ಮಾತು.

- Advertisement -

ಏಕೆಂದರೆ, ಹಾನಿಗೊಳಗಾದ ಯುದ್ಧವಿಮಾನದಿಂದ ಹೊರಜಿಗಿಯಲು ಪೈಲಟ್​ಗಳಿಗೆ ಅತ್ಯಲ್ಪ ಸಮಯಾವಕಾಶವಿರುತ್ತದೆ. ಈ ನಿರ್ಧಾರ ಕೈಗೊಂಡ ಮೂರು ಸೆಕೆಂಡ್​ಗಳ ಒಳಗಾಗಿ ಅವರು ವಿಮಾನದಿಂದ ಹೊರಜಿಗಿದು, ಪ್ಯಾರಾಚೂಟ್​ ಅನ್ನು ಹರಡುವಂತೆ ಮಾಡಿ ಸುರಕ್ಷಿತವಾಗಿ ಕೆಳಗಿಳಿಯಲಾರಂಭಿಸಿರುತ್ತಾರೆ.
ಅಂದಾಜು 7 ವರ್ಷಗಳ ಹಿಂದೆ ಇಂತಹ ಸಾಹಸ ಮೆರೆದ ವಿಶ್ವದ ಮೊದಲ ಏರ್​ ಮಾರ್ಷಲ್​ ಎಂದು ಪ್ರಖ್ಯಾತರಾಗಿರುವ ಅನಿಲ್​ ಚೋಪ್ರಾ ಇಂತಹ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾನಿಗೊಂಡ ಯುದ್ಧವಿಮಾನದಿಂದ ಹೊರಜಿಗಿಯುವ ಸಂದರ್ಭದಲ್ಲಿ ಅದೆಷ್ಟೇ ಧೈರ್ಯವಂತ ಪೈಲಟ್​ ಎಂದು ಹೇಳಿದರೂ ಅರೆಕ್ಷಣ ಮಾನಸಿಕವಾಗಿ ಕುಗ್ಗುವುದು ಶತಸಿದ್ಧ. ಹೊರಜಿಗಿಯುತ್ತಿದ್ದಂತೆ ಗಾಳಿಯ ಹೊಡೆತ, ಬಿಸಿಲು ಸೇರಿ ಹಲವು ಸಂಗತಿಗಳು ಪೈಲಟ್​ಗಳನ್ನು ಬಾಧಿಸುತ್ತವೆ.

ಹಾನಿಗೊಂಡ ಯುದ್ಧವಿಮಾನದಿಂದ ಪೈಲಟ್​ ಹೊರಜಿಗಿಯಲು ನಿರ್ಧರಿಸಿ ಎಜೆಕ್ಷನ್​ ಬಟನ್​ ಒತ್ತುತ್ತಿದ್ದಂತೆ ಪೈಲಟ್​ ಮೂರು ಸೆಕೆಂಡ್​ಗಳಲ್ಲಿ ಹೊರಗಿರುತ್ತಾರೆ. ಇದರ ಬೆನ್ನಲ್ಲೇ ವಿಮಾನದಲ್ಲಿರುವ ಕ್ಷಿಪಣಿಗಳು, ಸ್ಫೋಟಕಗಳು ಸಿಡಿಯಲಾರಂಭಿಸುತ್ತವೆ. ಒಂದು ರೀತಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಕ್ಕದಲ್ಲೇ ಯಾರೋ ಪಟಾಕಿ ಸಿಡಿಸುತ್ತಿದ್ದಾರೇನೋ ಎಂಬಂತೆ ಭಾಸವಾಗುತ್ತದೆ. ಬಳಿಕ ಸೀಟು ಬೇರ್ಪಟ್ಟು, ಪ್ಯಾರಾಚ್ಯೂಟ್​ ಹರವಿಕೊಳ್ಳುತ್ತದೆ. ಬಳಿಕ ಪೈಲಟ್​ ಸುರಕ್ಷಿತವಾಗಿ ಕೆಳಗಿಳಿಯಲಾರಂಭಿಸುತ್ತಾನೆ ಎಂದು ವಿವರಿಸುತ್ತಾರೆ.

2012ರ ಫೆಬ್ರವರಿಯಲ್ಲಿ ಫ್ರಾನ್ಸ್​ ನಿರ್ಮಿತ ಮಿರಾಜ್​ 2000 ಯುದ್ಧವಿಮಾನದ ಇಂಜಿನ್​ಗಳು ವಿಫಲವಾದ ಹಿನ್ನೆಲೆಯಲ್ಲಿ ಆ ವಿಮಾನದ ಪೈಲಟ್​ ಅನಿಲ್​ ಚೋಪ್ರಾ ಹಾಗೂ ಸಹಪೈಲಟ್​ ವಿಂಗ್​ ಕಮಾಂಡರ್​ ರಾಮ್​ ಕುಮಾರ್​ ವಿಮಾನದಿಂದ ಹೊರಜಿಗಿದಿದ್ದರು. ಬಳಿಕ ಪ್ಯಾರಾಚೂಟ್​ ನೆರವಿನಿಂದ ಸುರಕ್ಷಿತವಾಗಿ ಕೆಳಗಿಳಿದಿದ್ದರು. (ಏಜೆನ್ಸೀಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...