More

    ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

    ಜೈಪುರ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಬಾಬಾ ಸಾಹೇಬ್​ ಡಾ. ಬಿ. ಆರ್. ಅಂಬೇಡ್ಕರ್​ ಅವರು ಬರೆದಿರುವ ಸಂವಿಧಾನವನ್ನು ಬದಲಿಸಲು ಮುಂದಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಆದರೆ, ಅಂಬೇಡ್ಕರ್ ಅವರೇ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಏಕೆಂದರೆ ಸಂವಿಧಾನವು ನಮ್ಮ ಸರ್ಕಾರಕ್ಕೆ ಗೀತೆ, ಕುರಾನ್, ಬೈಬಲ್ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ರಾಜಸ್ಥಾನದ ಬಾರ್ಮೆರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನಮ್ಮ ಸರ್ಕಾರಕ್ಕೆ ಸಂವಿಧಾನ ಸರ್ವಶ್ರೇಷ್ಠವಾಗಿದೆ. ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನದ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಿ ಜನರಿಂದ ಅನುಕಂಪ ಗಿಟ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಈದ್​ ಹಬ್ಬದಂದು ನೆಚ್ಚಿನ ನಟನನ್ನು ನೋಡಲು ಬಂದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೋ ವೈರಲ್

    ಕಾಂಗ್ರೆಸ್​ ಪಕ್ಷವು ಅನೇಕ ಬಾರಿ ಅಂಬೇಡ್ಕರ್​ ಅವರನ್ನು ಅವಮಾನಿಸಿದೆ. ಸಂವಿಧಾನ ದಿನವನ್ನು ಪ್ರಸ್ತಾಪಿಸಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್​ ಎಂದಿಗೂ ಇದರ ಬಗ್ಗೆ ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷವು ಸಂವಿಧನ್ ದಿವಸ್ ಅನ್ನು ವಿರೋಧಿಸಿದೆ ಮತ್ತು ಸಂಸತ್ತಿನಲ್ಲಿ ಅದರ ವಿರುದ್ಧ ಭಾಷಣಗಳನ್ನು ಮಾಡಿದೆ. ಅಂಬೇಡ್ಕರ್​ ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ಅಭಿವೃದ್ಧಿಪಡಿಸಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್​ ಎಂದಿಗೂ ಅದರ ಬಗ್ಗೆ ಯೋಚನೆಯೂ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಿಗೆ ಮತ ಹಾಕಲು ಸಿದ್ದವಾಗಿದ್ದು, ಕಾಂಗ್ರೆಸ್​ ನೇತೃತ್ವದ ಇಂಡಿಯಾ ಮೈತ್ರಿಕೂಟ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts