More

    ಪ್ರತಿ ತಿಂಗಳು ಹಳ್ಳಿಯಲ್ಲಿ ಪೊಲೀಸ್ ವಾಸ್ತವ್ಯ

    ಹರಪನಹಳ್ಳಿ: ಜಿಲ್ಲೆಯಲ್ಲಿ ಪೊಲೀಸ್ ವಸತಿಗೃಹ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಎಸ್ಪಿ ಶ್ರೀಹರಿಬಾಬು ತಿಳಿಸಿದರು.

    ಪಟ್ಟಣದ ನೂತನ ಪೊಲೀಸ್ ಠಾಣೆ ಮುಂದೆ ಗಿಡಕ್ಕೆ ನೀರುಣಿಸುವ ಮೂಲಕ ಉದ್ಯಾನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

    ವಿಜಯನಗರ ಜಿಲ್ಲೆಯಲ್ಲಿ 273 ವಸತಿಗೃಹಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದರಲ್ಲಿ ಹರಪನಹಳ್ಳಿ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 90 ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಮಾರ್ಚ ವೇಳೆಗೆ ಟೆಂಡರ್ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

    ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಲು ಜಿಲ್ಲೆಯ 356 ಹಳ್ಳಿಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಾಸ್ತವ್ಯ ಹೂಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

    ಪ್ರತಿ ತಿಂಗಳು 50 ಹಳ್ಳಿಗಳನ್ನು ವಾಸ್ತವ್ಯಕ್ಕಾಗಿ ಆಯ್ಕೆ ಮಾಡಲಾಗುವುದು. ಹರಪನಹಳ್ಳಿ ತಾಲೂಕಿನ 8-10 ಹಳ್ಳಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗುವುದು. ಈ ಕಾರ್ಯಕ್ರಮ ಡಿ.18 ರಂದು ಆರಂಭವಾಗಲಿದೆ. ಎರಡನೇ ಹಂತ ಜನವರಿಯಲ್ಲಿ ನಡೆಸಲಾಗುವುದು.

    ಒಂದು ಊರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಾಸ್ತವ್ಯ ಇದ್ದು, ಬಾಲ್ಯವಿವಾಹ, ಪೋಸ್ಕೋ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳ ಅರಿವು ಮೂಡಿಸಲಾಗುವುದು. ಇದಲ್ಲದೆ ಜನಸಂಪರ್ಕ ಸಭೆ, ತೆರೆದ ಮನೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಎಂದರು.

    ಹರಪನಹಳ್ಳಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮವಹಿಸಲಾಗುವುದು. ಟ್ರಾಫಿಕ್ ಪೊಲೀಸ್ ಠಾಣೆ ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ಈ ಕುರಿತು ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ ಶ್ರೀಹರಿಬಾಬು, ಹರಪನಹಳ್ಳಿ ಠಾಣೆಯಲ್ಲಿ ವಿವಿಧ ಕಾರಣಗಳಿಂದ ಸೀಜ್ ಮಾಡಿದ ವಾಹನಗಳನ್ನು ಕೋರ್ಟ್ ಆದೇಶಿಸಿದರೆ ಮಾತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಸಿಪಿಐ ನಾಗರಾಜ ಎಂ.ಕಮ್ಮಾರ, ಪಿಎಸ್‌ಐ ಶಂಭುಲಿಂಗ ಹಿರೇಮಠ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts