More

    ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​: ಹಳ್ಳಿಗಳಿಗೆ ತೆರಳಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸಚಿವ ಸುನಿಲ್​ ಕುಮಾರ್ ಖಡಕ್ ಸೂಚನೆ

    ಬೆಂಗಳೂರು: ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಬೇಕೆಂದು ಇಂಧನ ಸಚಿವ ಸುನಿಲ್​ ಕುಮಾರ್​ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

    ಈ ಕುರಿತು ಆದೇಶಿಸಿರುವ ಅವರು, ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

    ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್​ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

    ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡುವಂತೆ ಸಚಿವರು ತಿಳಿಸಿದ್ದಾರೆ.

    ಸಹಾಯಕ ಕಾರ್ಯಪಾಲಕ ಇಂಜಿನಿಯರ್​ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ವಿವರಿಸಿದ್ದಾರೆ.

    ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 [email protected] ಇ-ಮೇಲ್​ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts