More

    ಪ್ರತೀ ಮಹಿಳೆಯಲ್ಲೂ ಸಾಧಕಿ ಇರುತ್ತಾಳೆ

    ಕೆ.ಎಂ.ದೊಡ್ಡಿ: ಮಹಿಳೆಯರು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿದಾಗ ಮಾತ್ರ ಸ್ವಾವಲಂಬಿ ಜೀವನ ಸಾಧ್ಯ ಎಂದು ಮದ್ದೂರಿನ ಎಚ್‌ಕೆವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ.ಲತಾ ಹೇಳಿದರು.

    ಇಲ್ಲಿನ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜಿ.ಮಾದೇಗೌಡ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸ್‌ಸ್ ವತಿಯಿಂದ ಆಯೋಜಿಸಿದ್ದ ಮಹಿಳಾ ಸಬಲೀಕರಣ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಮಹಿಳೆಯಲ್ಲೂ ಒಬ್ಬ ಸಾಧಕಿ ಇರುತ್ತಾಳೆ. ಹೆಣ್ಣು ಜನಿಸಿದರೆ ಮನೆಗೆ ಲಕ್ಷ್ಮೀ ಬಂದಂತೆ. ದುಡಿಯುವ ವಿಚಾರ ಬಂದಾಗ ಮಹಿಳೆಯರೇ ಮೇಲುಗೈ. ಓದಿದರಷ್ಟೇ ಸಾಲದು, ಓದಿನ ಹಿಂದಿನ ಮಹತ್ವ ಅರಿತು ಉನ್ನತ ಹುದ್ದೆ ಅಲಂಕರಿಸಿ ಸಮಾಜಕ್ಕೆ ಒಳಿತು ಮಾಡಿದಾಗ ಮಾತ್ರ ಸಬಲೀಕರಣ ಸಾಧ್ಯ ಎಂದರು.

    ಮಹಿಳೆಯರ ಶಿಕ್ಷಣಕ್ಕೆ ಮಾಜಿ ಸಂಸದ ದಿ. ಜಿ.ಮಾದೇಗೌಡ ಶ್ರಮ ವಹಿಸಿದ್ದಾರೆ. ಶ್ರಮ ಸಾರ್ಥಕತೆ ಪಡೆಯಬೇಕಾದರೆ ಮಹಿಳೆಯರು ಉನ್ನತ ಶಿಕ್ಷಣ ಪಡೆದು ಸ್ವಾವಲಂಬನೆ ಸಾಧಿಸಬೇಕು ಎಂದರು.

    ಕಾರ್ಯಕ್ರಮ ಉದ್ಘಾಟಿಸಿದ ಭಾರತೀ ಹೆಲ್ತ್ ಸೈನ್ಸ್‌ಸ್ ನಿರ್ದೇಶಕ ಡಾ. ತಮಿಜ್‌ಮಣಿ ಮಾತನಾಡಿ, ಸ್ತ್ರೀಯರು ಎಲ್ಲ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ವ್ಯಾಸಂಗ ಮಾಡುತ್ತಿದ್ದ ವೇಳೆ ಒಂದು ತರಗತಿಗೆ ಒಬ್ಬರೋ, ಇಬ್ಬರೋ ವಿದ್ಯಾರ್ಥಿನಿಯರು ಇರುತಿದ್ದರು. ಆದರೆ ಪ್ರಸ್ತುತ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರೇ ಹೆಚ್ಚಿದ್ದು, ಉತ್ತಮ ಶಿಕ್ಷಣವನ್ನೂ ಪಡೆಯುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಭಾರತೀ ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಟಿ. ಬಾಲಸುಬ್ರಮಣ್ಯಂ, ಜಿ.ಮಾದೇಗೌಡ ಇನ್ಟ್ಸಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸ್‌ಸ್ ಪ್ರಾಂಶುಪಾಲ ಡಾ.ಜಗದೀಶ್ ಸೇರಿದಂತೆ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts