More

    ಎಲ್ಲರೂ ಸರ್ಕಾರದ ಆದೇಶ ಪಾಲಿಸಿ

    ಯರಗಟ್ಟಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಹಾಗೂ ಮೊಹರಂ ಆಚರಣೆ ವೇಳೆ ಜನರು ಕಡ್ಡಾಯವಾಗಿ ಸರ್ಕಾರದ ಆದೇಶಗಳನ್ನು ಪಾಲಿಸಬೇಕು ಎಂದು ಸಿಪಿಐ ಮಂಜುನಾಥ ನಡುವಿನಮನಿ ಹೇಳಿದ್ದಾರೆ. ಶುಕ್ರವಾರ ಯರಗಟ್ಟಿ ಹಾಗೂ ಸುತ್ತಲಿನ ಗ್ರಾಮಗಳ ಜನರಿಗೆ ಕೋವಿಡ್-19 ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ಸಾರ್ವಜನಿಕ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

    ಕರೊನಾ ಕಾರಣ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಗಣೇಶ ಮಂಡಳಿಗಳು ಕಡ್ಡಾಯವಾಗಿ ಸ್ಥಳೀಯ ಆಡಳಿತ ಮಂಡಳಿಯಿಂದ ಅನುಮತಿ ಪಡೆದು ಮೂರ್ತಿ ಪ್ರತಿಷ್ಠಾಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬಾರದು ಎಂದು ಸಲಹೆ ನೀಡಿದರು.

    ಎಫ್.ವೈ.ಮಲ್ಲೂರ, ವಿಠ್ಠಲ ದೇವರಡ್ಡಿ, ವೆಂಕಟೇಶ ದೇವರಡ್ಡಿ, ಚೇತನ ಜಕಾತಿ, ಶಿವಾನಂದ ಪಟ್ಟಣಶೆಟ್ಟಿ, ಗಿರೀಶ ಪಾಟೀಲ, ಗೋವಿಂದ ದೇವರಡ್ಡಿ, ಕಿಟ್ಟು ತೋರಗಲ್ಲ, ರಮೇಶ ಪಾಟೀಲ ಇದ್ದರು.

    ನೇಸರಗಿ ವರದಿ: ಗಣೇಶ ಹಬ್ಬ ಆಚರಣೆ ಮಂಡಳಿಗಳಿಗೆ ಸರ್ಕಾರದ ಮಾರ್ಗಸೂಚಿ ತಿಳಿಸಲು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಶಾಂತಿಪಾಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಪಿಎಸ್‌ಐ ವೈ.ಎಲ್.ಶೀಗಿಹಳ್ಳಿ ಮಾತನಾಡಿ, ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ. ದೇವಸ್ಥಾನಗಳಲ್ಲಿ ಗರಿಷ್ಠ 4 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬಾರದು ಎಂದರು. ಎಎಸ್‌ಐ ಎಸ್.ವಿ.ಪತ್ತಾರ, ಸಂಗಪ್ಪ ತಲ್ಲೂರ, ಮಲ್ಲಿಕಾರ್ಜುನ ಸೋಮಣ್ಣವರ, ಬಸವರಾಜ ಬಾವಿಕಟ್ಟಿ, ನೀಲಕಂಠ ಸೊಗಲಿ, ಗೌಡಪ್ಪ ಪಾಟೀಲ, ನೇಸರಗಿ, ದೇಶನೂರ, ನಾಗನೂರು, ಯರಗುದ್ದಿ, ಹಣಬರಟ್ಟಿ, ಮದನಬಾವಿ ಗ್ರಾಮಸ್ಥರು ಇದ್ದರು.

    ದೊಡವಾಡ ವರದಿ: ಕೋವಿಡ್-19 ಹಿನ್ನೆಲೆಯಲ್ಲಿ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಆಚರಿಸುವುದು ಉತ್ತಮ ಎಂದು ಕಿತ್ತೂರು ಸಿಪಿಐ ಮಂಜುನಾಥ ಕುಸುಗಲ್ಲ ಹೇಳಿದ್ದಾರೆ. ದೊಡವಾಡ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳ ಗಣೇಶೋತ್ಸವ ಆಚರಣೆ ಮಂಡಳಿಗಳಿಗೆ ಸರ್ಕಾರದ ಹೊಸ ನಿಯಮಾವಳಿ ತಿಳಿಸಲು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿ, ಕರೊನಾ ಹರಡುವಿಕೆ ಹೆಚ್ಚಾಗಿರುವುದರಿಂದ ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನಗಳಲ್ಲಿ ಗರಿಷ್ಠ 4 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ಕಲ್ಪಿಸಲಾಗಿದೆ. ದರ್ಶನಕ್ಕೆ ಆಗಮಿಸುವ ಭಕ್ತರು ತಪ್ಪದೆ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಲಹೆ ನೀಡಿದರು. ಪಿಎಸ್‌ಐ ಆನಂದ ಕ್ಯಾರಕಟ್ಟಿ ಮಾತನಾಡಿ, ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ದೊಡವಾಡ, ಮಲ್ಲಮ್ಮನ ಬೆಳವಡಿ, ಪಟ್ಟಿಹಾಳ ಮತ್ತಿತರ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts