More

    ಎಲ್ಲರೂ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ

    ಬೆಟಗೇರಿ: ಗ್ರಾಮದ ಸಾರ್ವಜನಿಕರು ಸ್ವಚ್ಛತೆಗೆ ಮೊದಲು ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಎನ್. ಬಾವಿಕಟ್ಟಿ ಹೇಳಿದರು.

    ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢಶಾಲೆಗೆ ಕಸದ ಬುಟ್ಟಿಗಳನ್ನು ವಿತರಿಸಿ ಅವರು ಮಾತನಾಡಿದರು. ಕಸ-ಕಡ್ಡಿ ಹಾಗೂ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಶಾಲಾ ಮಕ್ಕಳು ಕಸದ ತೊಟ್ಟಿಗಳಲ್ಲಿ ಎಸೆದು, ಶಾಲಾ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು. ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಸದಸ್ಯರು ಹಾಗೂ ಅಧಿಕಾರಿಗಳು ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಡುತ್ತಿರುವ ಸಹಾಯ, ಸಹಕಾರವನ್ನು ಶಾಲೆಯ ಮುಖ್ಯ ಶಿಕ್ಷಕ ರಮೇಶ ಅಳಗುಂಡಿ ಸ್ಮರಿಸಿದರು.

    ಗ್ರಾಮಲೆಕ್ಕಾಧಿಕಾರಿ ಜೆ.ಎಂ. ನದಾಫ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಕರ ವಸೂಲಿಗಾರ ಸುರೇಶ ಬಾಣಸಿ, ಈರಣ್ಣ ದಂಡಿನ, ಶಿವಾನಂದ ಐದುಡ್ಡಿ ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ, ಗ್ರಾಮಸ್ಥರು, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts