More

    ಎಲ್ಲರ ಮೇಲಿದೆ ಕನ್ನಡ ಉಳಿಸುವ ಜವಾಬ್ದಾರಿ

    ಅಂಕೋಲಾ: ಧರ್ಮಕ್ಕಿಂತ ಮಾನವೀಯ ಸಂಬಂಧಗಳನ್ನು ಬೆಸೆಯುವ ಭಾಷೆಯೇ ದೊಡ್ಡದು. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆಯನ್ನು ಉಳಿಸುವ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹಿರಿಯ ಸಾಹಿತಿ ಹಾಗೂ ನಿಕಟ ಪೂರ್ವ ಜಿಲ್ಲಾ ಸಮ್ಮೇಳನಾಧ್ಯಕ್ಷ ಶಾಂತಾರಾಮ ನಾಯಕ ಹಿಚ್ಕಡ ಹೇಳಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕ ಮತ್ತು ಅಂಕೋಲಾ ತಾಲೂಕು ಘಟಕದ ಸಹಯೋಗದಲ್ಲಿ ಪಟ್ಟಣದ ಜೈಹಿಂದ್ ಹೈಸ್ಕೂಲ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ ಮಾತನಾಡಿ, ಪಠ್ಯಪುಸ್ತಕದ ಜತೆ ಪಾಲಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು. ದಿನಪತ್ರಿಕೆ ಓದುವ ಹವ್ಯಾಸವನ್ನು ಬೆಳೆಸಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿದರು. ಬಿಇಒ ಮಂಗಳಲಕ್ಷ್ಮೀ ಪಾಟೀಲ, ಸಾಹಿತಿ ಹೊನ್ನಮ್ಮ ನಾಯಕ, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷ ಮರ್ತುಜಾ ಆನೆಹೊಸೂರ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಬಾಲಚಂದ್ರ ನಾಯಕ, ಗಣಪತಿ ಆರ್. ನಾಯಕ, ಕಸಾಪ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಜಿ.ಆರ್. ತಾಂಡೇಲ, ಮುಖ್ಯೋಧ್ಯಾಪಕ ಪ್ರಭಾಕರ ಬಂಟ ಇದ್ದರು.

    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ. 100 ಅಂಕ ಗಳಿಸಿದ ತಾಲೂಕಿನ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸುಜೀತ ನಾಯ್ಕ, ರಫೀಕ ಶೇಖ್, ಪ್ರಕಾಶ ಕುಂಜಿ, ಎಂ.ಬಿ. ಆಗೇರ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts