More

    ಪ್ರತಿಯೊಬ್ಬರೂ ಹಕ್ಕು ಚಲಾಯಿಸಿ

    ಜಮಖಂಡಿ: ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕೆಂದು ತಹಸೀಲ್ದಾರ್ ಸದಾಶಿವ ಮಕ್ಕೋಜಿ ಹೇಳಿದರು.

    ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 100 ಪ್ರತಿಶತ ಮತದಾನ ಸಾಧಿಸಲು ತಾಲೂಕು ಸ್ವೀಪ್ ಸಮಿತಿ ಅಡಿಯಲ್ಲಿ ಮತದಾನ ಜಾಗೃತಿಗಾಗಿ ಅಲ್ಪಸಂಖ್ಯಾತರ ಪ್ರದೇಶಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ನೂರಕ್ಕೆ ನೂರರಷ್ಟು ಮತದಾನ ಚಲಾವಣೆಯಾಗಬೇಕು. ಆ ನಿಟ್ಟಿನಲ್ಲಿ ಕೇಂದ್ರ ಚುನಾವಣೆ ಆಯೋಗ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮತದಾನದ ಮಹತ್ವವನ್ನು ಎಲ್ಲರೂ ಅರಿಯಬೇಕು ಎಂದರು.

    ನಗರದ ಶಾ ಆಲಂ ಗೇಟ್ (ಅಕ್ಷಾ ಮಸೀದಿ)ದಿಂದ, ಅವಟಿ ಗಲ್ಲಿ, ಜಮ್‌ಜಮ್ ಕಾಲನಿ, ಮೋಮಿನ್ ಗಲ್ಲಿಯಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು. ತಾಪಂ ಇಒ ಭಾರತಿ ಚಲುವಯ್ಯ, ತಾಪಂ ಸಹಾಯಕ ನಿರ್ದೇಶಕ ಸಿದ್ಧಾರ್ಥ ಗೋಠೆ, ಪೌರಾಯುಕ್ತೆ ಲಕ್ಷ್ಮೀ ಅಷ್ಟಗಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಸಂತೋಷ ಬಾಡಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts