More

    ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

    ಪಾಂಡವಪುರ: ಬೈಕ್ ಸವಾರ ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹಾಗಾಗಿ ಪ್ರತಿಯೊಬ್ಬರೂ ಸಂಚಾರ ನಿಯಮ ಮತ್ತು ರಸ್ತೆ ಸುರಕ್ಷತೆಯನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಪೊಲೀಸರಿಗೆ ಸಹಕಾರ ನೀಡಬೇಕು. ರಸ್ತೆ ನಿಯಮಗಳನ್ನು ಮೀರಿದರೆ ಕಾನೂನಿನ ಪ್ರಕಾರ ದಂಡ ತೆರಬೇಕಾಗುತ್ತದೆ ಎಂದು ಪಾಂಡವಪುರ ಠಾಣೆ ಇನ್‌ಸ್ಪೆೆಕ್ಟರ್ ಕುಮಾರ್ ಎಚ್ಚರಿಕೆ ನೀಡಿದರು.

    ಪಟ್ಟಣದ ಬಿಜಿಎಸ್ ಶಾಲಾ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ರಸ್ತೆ ಸುರಕ್ಷತೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ತಿಳಿಸಬೇಕು. ಅಪ್ರಾಪ್ತ ಬಾಲಕರು ಚಾಲನಾ ಪರವಾನಗಿ ಹೊಂದಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೂ ಬೈಕ್ ಚಾಲನೆ ಮಾಡುತ್ತಿದ್ದಾರೆ. ಅಪ್ರಾಪ್ತರು ಬೈಕ್ ಚಾಲನೆ ಮಾಡಿ ಸಿಕ್ಕಿಬಿದ್ದರೆ ಕಾನೂನಿನ ರೀತಿ ಕ್ರಮ ವಹಿಸಿ ದಂಡ ವಿಧಿಸಲಾಗುವುದು. ಅಪ್ರಾಪ್ತರು ಬೈಕ್ ಚಾಲನೆ ಮಾಡಿ ಅಪಘಾತ ಸಂಭವಿಸಿದರೆ ಪಾಲಕರು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಎಚ್ಚರಿಸಿದರು.

    ಇತ್ತೀಚೆಗೆ ಅಪ್ರಾಪ್ತರು ಪ್ರೀತಿ, ಪ್ರೇಮದ ಜಾಲಕ್ಕೆ ಸಿಲುಕಿ ಮನೆ ಬಿಟ್ಟು ಹೋಗುವ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಕೂಡ ಅಪರಾಧ. ಇಂತಹ ಪ್ರಕರಣಗಳಿಗೆ ಪೋಕ್ಸೋ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
    ಪಿಎಸ್‌ಐ ಧರ್ಮಪಾಲ್, ಕಾನ್‌ಸ್ಟೆಬಲ್ ತೌಸಿಫ್, ಬಿಜಿಎಸ್ ಶಾಲಾ ಶಿಕ್ಷಕ ವೃಂದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts