More

  ಪ್ರತಿಯೊಬ್ಬರೂ ಸಂವಿಧಾನದ ಮಹತ್ವ ಅರಿಯಿರಿ

  ಚನ್ನರಾಯಪಟ್ಟಣ: ಭಾರತದ ಸಂವಿಧಾನ ಪವಿತ್ರ ಗ್ರಂಥವಾಗಿದ್ದು ಇದರ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶೆ ಮಮತಾ ಪಿ. ತಿಳಿಸಿದರು.

  ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ವತಿಯಿಂದ ಮಂಗಳವಾರ ಪಟ್ಟಣದ ರಾಧಾಕೃಷ್ಣ ವಿದ್ಯಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಸೇವೆಗಳ ಸಮಿತಿ ಉದ್ದೇಶ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದಲ್ಲಿ ಹಕ್ಕು ಹಾಗೂ ಕರ್ತವ್ಯದ ಬಗ್ಗೆ ತಿಳಿಸಲಾಗಿದೆ. ಪ್ರತಿಯೊಬ್ಬರಲ್ಲೂ ಕಾನೂನು ಪ್ರಜ್ಞೆ ಇರಬೇಕು. ಕಾನೂನು ಇಲ್ಲದ ಸಮಾಜ ಊಹಿಸಿಕೊಳ್ಳುವುದು ಅಸಾಧ್ಯ. ಸಂವಿಧಾನ ರಕ್ಷಣೆ ಜತೆಗೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.\

  ತಾಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎ.ವಾಸು ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರು ಉಚಿತ ಕಾನೂನಿನ ನೆರವು ಪಡೆದುಕೊಳ್ಳಬೇಕು. ಲೋಕ ಅದಾಲತ್‌ನ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು. ವಕೀಲೆ ಚಂದನಾ ಕಾನೂನು ಸೇವೆಗಳ ಸಮಿತಿ ಉದ್ದೇಶವನ್ನು ತಿಳಿಸಿದರು. ಪ್ರಾಂಶುಪಾಲ ಕಾರ್ತಿಕ್, ಭಗವಾನ್ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts