More

    ಎಲ್ಲರೂ ಕರೊನಾ ಲಸಿಕೆ ಮೂರನೇ ಡೋಸ್ ಪಡೆಯಬೇಕು; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಶೀಘ್ರ ಬಿಡುಗಡೆ: ಸಚಿವ ಸುಧಾಕರ್

    ಬೆಂಗಳೂರು: ಕೆಲ ದೇಶಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೊಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಕೋವಿಡ್ ನಿಯಂತ್ರಿಸಲು ರಾಜ್ಯ ಎಲ್ಲ ರೀತಿಯಲ್ಲಿ ಸಿದ್ಧವಿದೆ. ಕೇಂದ್ರದ ಸೂಚನೆಯಂತೆ ಹೊಸದಾಗಿ ಸೋಂಕಿಗೆ ಒಳಗಾಗುವವರ ಮಾದರಿಗಳನ್ನು ಜಿನೊಮಿಕ್ ಸೀಕ್ಷೆನ್ಸಿಂಗ್ ಪರೀಕ್ಷೆ ನಡೆಸಲು ಈಗಾಗಲೇ ಎಲ್ಲ ರೀತಿಯ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

    ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಸೋಂಕು ಮತ್ತೆ ಏರಿಕೆಯಾಗಿದೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಹಾಗಾಗಿ ದೇಶದಲ್ಲಿ ಸೋಂಕು ನಿಯಂತ್ರಿಸಲು ಎಲ್ಲರೂ ಕೋವಿಡ್ ಲಸಿಕೆಯ ಮೂರನೇ ಡೋಸ್ ಪಡೆದುಕೊಳ್ಳಬೇಕು ಎಂದ ಅವರು, ಕೋವಿಡ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

    ಮೂರನೇ ಡೋಸ್ ಪಡೆದವರು ಶೇ. 20: ಕೋವಿಡ್ ಸೋಂಕು ಬರದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ತೀರ ಅಗತ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ಎರಡು ಡೋಸ್‌ಗಳು ಶೇ. 100 ಸಾಧನೆ ಮಾಡಿದೆ. ಆದರೆ ಈವರೆಗೂ ಕೇವಲ ಶೇ. 20 ಜನರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ಮುಂದೆ ಬಂದು ತಪ್ಪದೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

    ವಿಮಾನ ನಿಲ್ದಾಣಗಳಲ್ಲಿ ಕ್ರಮ: ಕೋವಿಡ್ ಹಿನ್ನೆಲೆಯಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರ ದೇಶಗಳಿಂದ ಅತಿ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಹಾಗಾಗಿ ಹೆಚ್ಚಿನ ನಿಗಾ ಇರಿಸಲು ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನ ಪಡೆದುಕೊಂಡು ಕ್ರಮ ವಹಿಸಲಾಗುವುದು. ಕೋವಿಡ್ ನಿಯಂತ್ರಣ ಸಂಬಂಧ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

    ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ; ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಯ್ತು!

    ಎನ್‌ಪಿಎಸ್ ವಿರೋಧಿ ಹೋರಾಟಕ್ಕೆ ಭಾರಿ ಹಿನ್ನಡೆ; ಇಲ್ಲಿದೆ ಕಾರಣ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts