More

    ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ

    ಚಿಕ್ಕಮಗಳೂರು: ಭಾರತ ಸಂವಿಧಾನವು ದೇಶದ ನಾಗರೀಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವೂ ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬ ಮತದಾರರು ಏ. ೨೬ ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಡಿಸಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಮೀನಾ ನಾಗರಾಜ್ ತಿಳಿಸಿದರು.

    ನಗರದ ಎಸ್‌ಪಿ ಕಚೇರಿ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ರಂಗೋಲಿ ವೀಕ್ಷಿಸಿ ಮಾತನಾಡಿದ ಅವರು, ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸ್ವೀಪ್ ಸಮಿತಿಯಲ್ಲಿ ಪ್ರತಿ ಮತದಾರನಿಗೆ ಮತದಾನದ ಮಹತ್ವ ತಿಳಿಸಿ ಅರಿವು ಮೂಡಿಸಿ ತಪ್ಪದೇ ಮತದಾನ ಮಾಡುವಂತೆ ಮಾಡುವುದು ಮತ್ತು ಪ್ರತಿ ಅರ್ಹ ಮತದಾರರು ಮತದರರ ಪಟ್ಟಿಯಲ್ಲಿ ತಪ್ಪದೇ ತಮ್ಮ ಹೆಸರು ಸೇರ್ಪಡೆ ಆಗಿರುವ ಬಗ್ಗೆ ಖಾತರಿ ಮಾಡಿಕೊಳ್ಳಲು ತಿಳಿಸುವುದಾಗಿದೆ ಎಂದರು.
    ನಗರ ಪ್ರದೇಶದಲ್ಲಿ ಮತದಾನ ಜಾಗೃತಿಗೆ ಆದ್ಯತೆ ನೀಡಲಾಗುತ್ತಿದ್ದು, ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಈ ಬಾರಿ ಮತದಾನದ ಪ್ರಮಾಣ ಶೇ. ೯೦ ಕ್ಕಿಂತಲೂ ಹೆಚ್ಚು ಆಗುವಂತೆ ಮಾಡಲು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
    ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯ ಪ್ರತಿ ಗ್ರಾಪಂ ಮಟ್ಟದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜನರ ಸಹಭಾಗಿತ್ವದಲ್ಲಿ ಚುನಾವಣೆ, ಮತದಾರರ ಪಟ್ಟಿ, ಮತದಾನ ಜಾಗೃತಿ ಕೆಲಸವನ್ನು ಜಿಲ್ಲಾ ಸ್ವೀಪ್ ಸಮಿತಿ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
    ಎಸ್‌ಪಿ ಕಚೇರಿ ಮುಂಭಾಗದ ರಸ್ತೆಯಲ್ಲಿ ವಿವಿಧ ಸಂಘಗಳ ಮಹಿಳೆಯರು ವಿವಿಧ ಬಣ್ಣಗಳ ಆಕರ್ಷಣೆಯ ರಂಗೋಲಿ ಹಾಕುವ ಮೂಲಕ ಮತದಾನದ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಯಿತು. ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಗೀತಾ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts