More

  ಬಾಲ್ಯ ವಿವಾಹ ತಡೆಗೆ ಎಲ್ಲರ ಸಹಕಾರ ಅಗತ್ಯ


  ಚಾಮರಾಜನಗರ : ಬಾಲ್ಯ ವಿವಾಹ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಸಿಡಿಪಿಒ ನಂಜಮಣಿ ಹೇಳಿದರು.


  ತಾಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೊ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.


  ಬಾಲ್ಯವಿವಾಹ ಮಕ್ಕಳ ಮಾನಸಿಕ ಹಾಗೂ ದೈಹಿಕವಾಗಿ ಪರಿಣಾಮ ಬೀರಲಿದೆ. ಆದ್ದರಿಂದ ಪಾಲಕರು ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳದೆ ಚೆನ್ನಾಗಿ ಓದಿಸಿ, ಬೆಳೆಸಬೇಕು ಎಂದು ಸಲಹೆ ನೀಡಿದರು.


  ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ ಮಾಡಲಾಯಿತು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮಂಜುಳಾ, ಶಿಕ್ಷಕರಾದ ರಾಜೇಶ್ವರಿ, ಮಮತಾ, ಶಿವರಾಂ, ಸತೀಶ್, ರಾಜಪ್ಪ, ಮುರುಗ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts