More

    ಇವಿಎಂ-ವಿವಿ ಪ್ಯಾಟ್ ಬಳಕೆ ಬಗ್ಗೆ ತಿಳಿಯಬೇಕೆ? ಈ ಸುದ್ದಿ ಓದಿ

    ಕೊಪ್ಪಳ: ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಬಳಕೆ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ತಾಪಂ ಕಚೇರಿ ಆವರಣದಲ್ಲಿ ಇವಿಎಂ, ವಿವಿಪ್ಯಾಟ್ ಬಳಸಿ ರಚಿಸಿರುವ ಅಣಕು ಮತದಾನ ಕೇಂದ್ರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

    VV PAT-EVM
    ಇವಿಎಂ, ವಿವಿ ಪ್ಯಾಟ್

    ಮತದಾನ ಪ್ರಮಾಣ ಹೆಚ್ಚಳಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಭಿನ್ನ ಯೋಚನೆಗಳ ಮೂಲಕ ಜರನ್ನು ಸೆಳೆವ ಕೆಲಸ ಮಾಡುತ್ತಿದ್ದೇವೆ. ಮತದಾನ ನಮಗೆ ಸಂವಿಧಾನ ಕಲ್ಪಿಸಿರುವ ವಿಶೇಷ ಹಾಗೂ ಅಮೂಲ್ಯ ಹಕ್ಕು. ವಿವೇಚನಾಯುಕ್ತವಾಗಿ ಅರ್ಹರಿಗೆ ಮತ ನೀಡಬೇಕು. ಇದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿದೆ.

    ಇದನ್ನೂ ಓದಿ: ಈ ಬಾರಿ M3 EVM ಬಳಕೆ, ಎಲ್ಲ ಪಕ್ಷಗಳ ಜತೆ ಹೊಸ ಯಂತ್ರ ಪರಿಶೀಲನೆ: ರಾಜ್ಯ ಚುನಾವಣಾ ಆಯೋಗ ಮಾಹಿತಿ

    ಹೊಸದಾಗಿ ಮತದಾನ ಹಕ್ಕು ಪಡೆದವರು ಕಡ್ಡಾಯವಾಗಿ ಮತ ಚಲಾಯಿಸಿ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡಿ. ಸಂದೇಹಗಳಿದ್ದಲ್ಲಿ ಅಣಕು ಮತದಾನ ಕೇಂದ್ರಕ್ಕೆ ಭೇಟಿ ನೀರಿ ಪರಿಹರಿಸಿಕೊಳ್ಳಬಹುದು. ಇದಕ್ಕಾಗಿ ಕೇಂದ್ರ ಆರಂಭಿಸಲಾಗಿದೆ ಎಂದರು.

    ತಾಪಂ ಇಒ ದುಂಡಪ್ಪ ತುರಾದಿ, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕ ರಾಜೇಸಾಬ್, ತಾಲೂಕು ಸ್ವೀಪ್ ತಂಡದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts