20.4 C
Bengaluru
Sunday, January 19, 2020

ಕಾಂಗ್ರೆಸ್​ನ ರಮೇಶ ಕುಮಾರ್ ಈಗ ಅನರ್ಹರಾಗಿದ್ದಾರೆ: ಶಿವರಾಮ ಹೆಬ್ಬಾರ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಕಾಂಗ್ರೆಸ್ ಬಿಟ್ಟು , ಶಾಸಕತ್ವಕ್ಕೆ ರಾಜೀನಾಮೆ ಕೊಟ್ಟು ಅನರ್ಹ ಎನಿಸಿಕೊಂಡಿದ್ದ ಶಿವರಾಮ ಹೆಬ್ಬಾರ ಬಿಜೆಪಿಯಿಂದ ಭಾರಿ ಮತ ಪಡೆದು ಸತತ ಮೂರನೇ ಬಾರಿಗೆ ಯಲ್ಲಾಪುರ ಕ್ಷೇತ್ರದ ಶಾಸಕರಾಗಿದ್ದಾರೆ. ವಿಜಯೋತ್ಸವದ ಸಂಭ್ರಮದಲ್ಲಿದ್ದ ಸಂದರ್ಭದಲ್ಲಿ ‘ವಿಜಯವಾಣಿ’ ಜತೆ ಅವರು ನಡೆಸಿದ ಚಿಟ್ ಚಾಟ್ ಇಲ್ಲಿದೆ.

ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೀರಿ ಹೇಗನ್ನಿಸುತ್ತಿದೆ?

ಶಿವರಾಮ ಹೆಬ್ಬಾರ: ಕಳೆದ 15 ವರ್ಷದಿಂದ ರಾಜಕೀಯದಲ್ಲಿದ್ದು, ಕ್ಷೇತ್ರದ ನನ್ನ ಜನರ ನಾಡಿ ಮಿಡಿತ, ಬೇಕು-ಬೇಡಗಳನ್ನು ಅರಿತವ ನಾನು. ಇಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸುವ ನಿರೀಕ್ಷೆ ನನಗೆ ಮೊದಲೇ ಇತ್ತು. ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ಸಂತಸವಾಗಿದೆ. ನಾನು ವೈಯಕ್ತಿಕ ನಿಂದೆ ಮಾಡುವುದಿಲ್ಲ. ದೇವರು ಅವರಿಗೆ ಒಳ್ಳೆಯದನ್ನು ಮಾಡಲಿ. ಭೀಮಣ್ಣ ಈಗ ನನ್ನ ಎದುರಾಳಿಯಾಗಿದ್ದರೂ ವೈಯಕ್ತಿಕವಾಗಿ ಸ್ನೇಹಿತರು. ಅವರು ಈ ಸೋಲನ್ನು ಸ್ಪರ್ಧಾತ್ಮಕ ಮನೋಭಾವದಿಂದ ತೆಗೆದುಕೊಳ್ಳಬೇಕು.

ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ತಮ್ಮನ್ನು ಅನರ್ಹ ಎಂದು ಹೀಯಾಳಿಸಿತ್ತು. ಅದಕ್ಕೇನಂತೀರಿ?

ನನ್ನನ್ನು ಅನರ್ಹರನ್ನಾಗಿ ಮಾಡಿದ ಕಾಂಗ್ರೆಸ್​ನ ರಮೇಶ ಕುಮಾರ್ ಅವರನ್ನು ಕ್ಷೇತ್ರದ ಜನರು ಅನರ್ಹರಾಗಿಸಿದ್ದಾರೆ. ಸತತವಾಗಿ ಗೆದ್ದು, ಜನಪ್ರಿಯನಾಗಿದ್ದ ನನ್ನನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ನಾಲ್ಕು ದಶಕದಿಂದ ಕ್ಷೇತ್ರವನ್ನು ಆಳುತ್ತಿದ್ದ ನಾಯಕರು ನನ್ನನ್ನು ಕಟ್ಟಿ ಹಾಕಬೇಕಲು ಪ್ರಯತ್ನಿಸಿದರು. ಪೀತ ಪತ್ರಿಕೆಯೊಂದರ ಮೂಲಕ ಅಪ ಪ್ರಚಾರ ಮಾಡಿದರು. ದ್ವೇಷ, ಷಡ್ಯಂತ್ರದ ರಾಜಕಾರಣಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ.

ನಿಮ್ಮ ಗೆಲುವಿಗೆ ಮುಖ್ಯ ಕಾರಣ ಏನು?

ಕ್ಷೇತ್ರದ ಮತದಾರರು ಯಾವತ್ತೂ ಜಾತಿಯ ಪ್ರಭಾವಕ್ಕೆ ಒಳಗಾದವರಲ್ಲ. ನನ್ನ ಅಭಿವೃದ್ಧಿಪರ ರಾಜಕಾರಣವನ್ನು ಮೆಚ್ಚಿಕೊಂಡಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ, ಸೇರಿ ರಾಜ್ಯಮಟ್ಟದ ಹಲವು ಮುಖಂಡರು, ಕಾರ್ಯಕರ್ತರು, ನಿರಂತರವಾಗಿ ಶ್ರಮಿಸಿರುವುದು ಅಭೂತಪೂರ್ವ ಗೆಲುವಿಗೆ ಕಾರಣವಾಗಿದೆ. ಎಲ್ಲರಿಗೂ ಅಭಿನಂದನೆಗಳು.

ಮುಂದೆ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಯೋಜನೆ?

ಅಭಿವೃದ್ಧಿಪರ ಕಾರ್ಯವನ್ನು ಮುಂದುವರಿಸಿ ನಾನು ಯಲ್ಲಾಪುರ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿಯಾಗಿ ಮಾಡಲಿದ್ದೇನೆ. ಕನ್ನಡದ ಮೊದಲ ರಾಜಧಾನಿ ಬನವಾಸಿಗೆ ಮೂಲ ಸೌಕರ್ಯ ನೀಡಿ, ಮಾದರಿ ಕ್ಷೇತ್ರವಾಗಿ ರೂಪಿಸಬೇಕಿದೆ. ಮುಂಡಗೋಡಿನಲ್ಲಿ ನೀರಾವರಿ ಸೌಲಭ್ಯ ಹೆಚ್ಚಿಸಿ ಕೃಷಿಗೆ ಉತ್ತೇಜನ ನೀಡಲಿದ್ದೇನೆ. ಯಲ್ಲಾಪುರ, ಮುಂಡಗೋಡ ಪಟ್ಟಣಗಳಿಗೆ ಶೀಘ್ರ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಿದ್ದೇನೆ.

ಸಚಿವರಾಗಿ ಯಾವ ಖಾತೆ ಬಯಸುತ್ತೀರಿ?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...