More

    ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು-ಜ್ಞಾನೇಶ್ ಕುಮಾರ್ ನೇಮಕ

    ನವದೆಹಲಿ: ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ರಾಷ್ಟ್ರೀಯ ಚುನಾವಣಾ ಆಯೋಗದ ನೂತನ ಆಯ್ತುಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಕೇರಳ ಹಾಗೂ ಪಂಜಾಬ್​ ಮೂಲದ ಇಬ್ಬರು ಮಾಜಿ ಅಧಿಕಾರಿಗಳನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಿಸಲಾಗಿದೆ.

    ಇದನ್ನೂ ಓದಿ: ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ: ಮಲ್ಲಿಕಾರ್ಜುನ ಖರ್ಗೆ

    ಈ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ, ಸಮಿತಿ ಮುಂದೆ ಒಟ್ಟು ಆರು ಹೆಸರುಗಳು ಬಂದಿದ್ದವು. ಅವರಲ್ಲಿ ಸಂಧು ಮತ್ತು ಕುಮಾರ್‌ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಆಯ್ಕೆ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಇರಬೇಕಿತ್ತು. ಆದರೆ, ಕಾನೂನು ಸಚಿವರ ನೇತೃತ್ವದ ಈ ಸಮಿತಿಯ ಎದುರು ಇತ್ತು ಎನ್ನಲಾದ 212ಕ್ಕೂ ಅಧಿಕ ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು.

    ಈ ಸಮಿತಿಯಲ್ಲಿ ಸರ್ಕಾರದ ಸದಸ್ಯರೇ ಹೆಚ್ಚಾಗಿದ್ದಾರೆ. ಈ ಹಿಂದೆ, ಸರ್ಕಾರ ನನಗೆ 212 ಹೆಸರುಗಳನ್ನು ನೀಡಿತ್ತು. ಆದರೆ ನೇಮಕಾತಿಗೆ 10 ನಿಮಿಷಗಳ ಮೊದಲು ಕೇವಲ ಆರು ಹೆಸರುಗಳನ್ನು ನೀಡಿದ್ದಾರೆ. ಶಾರ್ಟ್-ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರುಗಳು ನನಗೆ ಮುಂಚಿತವಾಗಿ ಲಭ್ಯವಾಗಲಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts