ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರದ ದುರಾಡಳಿತ ಹೆಚ್ಚಾಗಿದ್ದು, ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ರಾಜ್ಯದಲ್ಲಿ ರಸ್ತೆಗೆ ಒಂದು ಹಿಡಿ ಮಣ್ಣನ್ನು ಹಾಕಲಾರದ … Continue reading ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ: ಬಸವರಾಜ ಬೊಮ್ಮಾಯಿ