More

    ಅನಿಷ್ಠ ಸರ್ಕಾರದ ವಿರುದ್ದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

    ಬೆಂಗಳೂರು: ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

    ಸಂಪೂರ್ಣ ದಲಿತ ವಿರೋಧಿಯಾಗಿದೆ

    ಬಿಜೆಪಿ-ಜೆಡಿಎಸ್​ ಅಸಹಾಯಕವಾಗಿವೆ ಎಂಬ ಕಾಂಗ್ರೆಸ್​ ಟೀಕೆ ಕುರಿತು ಪ್ರತಿಕ್ರಿಯಿಸಿ ಈಗ I.N.D.I.A ಎಂಬ ಹೆಸರಿನಲ್ಲಿ ಇವರು ಒಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ, ಹಾಗಾದರೆ ಅವು ಅಸಹಾಯಕರಾ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್​ ಟೀಕೆಗೆ ತಿರುಗೇಟು ನೀಡಿದ್ದಾರೆ.

    BJP Leaders

    ಸಚಿವ ಡಿ. ಸುಧಾಕರ್​ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿ ಈ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರ ವಿಸ್ತೃತ ತನಿಖೆಗೆ ಆದೇಶಿಸಬೇಕು. ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆದುಕೊಳ್ಳಬೇಕು. ಅದನ್ನು ಹಿಟ್ಟು ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿಸುವಲ್ಲಿ ಬಾಲಿವುಡ್​ ಪ್ರಮುಖ ಪಾತ್ರ: ಕೈಲಾಶ್​ ಖೇರ್​

    ಈ ಪ್ರಕರಣದಲ್ಲಿ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು. ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಸಾಮಾನ್ಯ ಜನರನ್ನು ಹೇಗೆ ಪೊಲಿಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಾರೋ, ಅದೇ ರೀತಿ ಸಚಿವರನ್ನು ವಿಚಾರಣೆ ನಡೆಸಬೇಕು. ಪೊಲಿಸರು ಒತ್ತಡಕ್ಕೆ ಮಣಿದರೆ, ರಾಜ್ಯದ ದಲಿತರು ಸರ್ಕಾರದ ವಿರುದ್ದ ಹೋರಾಟ ನಡೆಸಲಿದ್ದಾರೆ. ಕಾಂಗ್ರೆಸ್ ನಾಯಕರು ಭಾಷಣದಲ್ಲಿ ಮಾತ್ರ ದಲಿತರ ಪರ ಮಾತನಾಡುತ್ತಾರೆ. ಆದರೆ, ಅವರ ಸಚಿವರ ನಡವಳಿಕೆ ಸಂಪೂರ್ಣ ದಲಿತ ವಿರೋಧಿಯಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರು ಇವರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

    ಸ್ಟಾಲಿನ್​ ಮನವೊಲಿಸಲಿ

    ರಾಜ್ಯ ಸರ್ಕಾರ ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವಪಕ್ದ ‌ನಿಯೋಗ‌ ಕರೆದುಕೊಂಡು ಹೋಗುವ ಬದಲು ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿ, ಅವರ ಮನವೊಲಿಸಬೇಕು. ಸುಪ್ರೀಂ ಕೋರ್ಟ್​ನಲ್ಲಿ ಪ್ರಕರಣ ಇರುವುದರಿಂದ ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ.

    ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರನ್ನು ಕುರುವೈ ಬೆಳೆಗೆ ಅಕ್ರಮವಾಗಿ ಬಳಸಿಕೊಂಡಿದೆ ಎಂದು ರಾಜ್ಯ ಸರ್ಕಾರ CWMA ಸಭೆಯಲ್ಲಿ ಬಲವಾಗಿ ಹೇಳುತ್ತಿಲ್ಲ. ಸೆಪ್ಟೆಂಬರ್​ 12 ರ ನಂತರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ತನ್ನ ನಿಲುವಿಗೆ ಎಷ್ಟು ಬದ್ದವಗಿರುತ್ತದೆ ಕಾದು ನೋಡೋಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts