More

    ನಾನು ಕೇಸರಿ ಶಾಲು ಧರಿಸುವುದು ಮಹಾ ಅಪರಾಧವೇ: ಮಾಜಿ ಸಿಎಂ ಎಚ್​ಡಿಕೆ ಪ್ರಶ್ನೆ

    ಬೆಂಗಳೂರು: ಕಾಂಗ್ರೆಸ್​ನವರಿಗೆ ಕೇಸರಿ ಬಣ್ಣ ಕಂಡರೆ ಸಂಕುಚಿತ ಮನೋಭಾವ ಏಕೆ, ನಾನು ಕೇಸರಿ ಶಾಲಿ ಧರಿಸುವುದು ಮಹಾ ಅಪರಾಧವೇ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ಕೃಷಿ ಸಚಿವ ಚೆಲುವರಾಯಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್​ಡಿಕೆ, ಪಕ್ಷ ಉಳಿಸಿಕೊಳ್ಳುವುದನ್ನು ನಾನು ಇವರಿಂದ ಕಲಿಯಬೇಕಿಲ್ಲ. ಜನರು ಕೊಟ್ಟಿರುವ ಪ್ರೀತಿ ನನ್ನ ಜತೆಗಿದೆ ಎಂದು ತಿರುಗೇಟು ನೀಡಿದ್ದಾರೆ.

    ಕೇಸರಿ ಶಾಲು ಹಾಕಿದ ತಕ್ಷಣ ನಾನು ಜೆಡಿಎಸ್‌ ಪಕ್ಷವನ್ನು ಅವನತಿಗೆ ತಳ್ಳಿದ್ದೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿದ್ದಾರೆ. ಪಕ್ಷ ಉಳಿಸಿಕೊಳ್ಳುವುದನ್ನು ನಾನು ಇವರಿಂದ ಕಲಿಯಬೇಕಿಲ್ಲ. ಜನರು ಕೊಟ್ಟಿರುವ ಪ್ರೀತಿ ನನ್ನ ಜತೆಗಿದೆ. ನಮ್ಮ ರಾಷ್ಟ್ರ ಧ್ವಜದಲ್ಲಿ ಯಾವ ಬಣ್ಣಗಳಿವೆ ಎಂಬುದು ಕಾಂಗ್ರೆಸ್‌ನವರಿಗೆ ತಿಳಿದಿಲ್ಲವೆವೇ? ರಾಷ್ಟ್ರ ಧ್ವಜದಿಂದ ಕೇಸರಿ ಬಣ್ಣ ತೆಗೆದರೆ ಏನು ಅರ್ಥ ಉಳಿಯುತ್ತದೆ. ಕೇಸರಿ ಬಣ್ಣದ ಮೇಲೆ ಅಸಹನೆ, ಸಂಕುಚಿತ ಭಾವನೆ ಏಕೆ ಎಂದು ಪ್ರಶ್ನಿಸಿದ್ದಾರೆ.

    BJP JDS Protest

    ಇದನ್ನೂ ಓದಿ: ಬಿಗ್​ಬಾಸ್​ ಗ್ರ್ಯಾಂಡ್​ ಫಿನಾಲೆ; ಶೋ ಮುಗಿಯುವುದಕ್ಕೂ ಮುನ್ನ ಸ್ಫರ್ಧಿಗಳಿಗೆ ಸಿಕ್ತು ಬಂಪರ್ ಆಫರ್​

    ನಾನು ಕೇಸರಿ ಶಾಲು ಹಾಕಿಕೊಂಡಿದ್ದರ ಬಗ್ಗೆ ಮಾತನಾಡುತ್ತಿದ್ದಾರೆ. ದಲಿತ ಸಮುದಾಯದ ಬಂಧುಗಳು ಸಭೆಗೆ ಕರೆದಾಗ ಅಲ್ಲಿಗೆ ಹೋಗಿ ಜೈ ಭೀಮ್‌ ಕಾರ್ಯಕರ್ತರು ಧರಿಸುವ ನೀಲಿ ಬಣ್ಣದ ಶಾಲನ್ನೂ ಹಾಕಿದ್ದೇನೆ. ಇದು ಇವರ ಕಣ್ಣಿಗೆ ಕಾಣಲಿಲ್ಲವೇ. ಮಂಡ್ಯ ಜಿಲ್ಲೆಯನ್ನು ಹಾಳು ಮಾಡಲು ಕುಮಾರಸ್ವಾಮಿ ಬಂದಿದ್ದಾರೆ ಎಂದು ನಮ್ಮ ಹಳೆಯ ಗೆಳೆಯರು ಹೇಳಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಜತೆಯಾಗಿ ಪ್ರತಿಭಟನೆ ನಡೆಸಲಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಪ್ರಕಟಿಸಿದ್ದರು. ಮಂಡ್ಯ ಜಿಲ್ಲೆಯ ನನ್ನ ಅಭಿಮಾನಿಗಳು, ಬೆಂಬಲಿಗರೂ ಒತ್ತಾಯ ಮಾಡಿದ್ದರು. ಆ ಕಾರಣದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ ಎಂದು ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ಕೆರಗೋಡು ಘಟನೆಗೂ ನನಗೂ ಏನು ಸಂಬಂಧವಿದೆ? ಬಿಜೆಪಿಯವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿದ್ದೇನೆ. ಅದೂ ಕೊನೆಯ ಹಂತದಲ್ಲಿ ಪಾಲ್ಗೊಂಡಿದ್ದೇನೆ. ಪ್ರತಿಭಟನಾ ಸಭೆಯಲ್ಲಿ ಫ್ಲೆಕ್ಸ್‌ ಕಿತ್ತುಹಾಕಲು, ಬೆಂಕಿ ಹಚ್ಚಲು ತಾವು ಕರೆ ನೀಡಿಲ್ಲ. ತಮ್ಮ ಭಾಷಣದ ಸಂಪೂರ್ಣ ವಿವರ ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿದೆ. ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಷ್ಟೇ ತಮ್ಮ ಆಗ್ರಹವಾಗಿತ್ತು.

    ಕೆರಗೋಡು ಗ್ರಾಮದಲ್ಲಿ ರಾಜ್ಯ ಸರ್ಕಾರದಿಂದ ಬಾವುಟ ಹಾರಿಸಿರಲಿಲ್ಲ. ಅಲ್ಲಿನ ಗ್ರಾಮಸ್ಥರು ಬಾವುಟ ಹಾರಿಸಿದ್ದರು. ಸ್ಥಳೀಯ ಕಾಂಗ್ರೆಸ್‌ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ಗೊಂದಲ, ಗಲಭೆ ಸೃಷ್ಟಿಸಲಾಗಿದೆ. ಕೆರಗೋಡು ಬಸ್‌ ನಿಲ್ದಾಣದಲ್ಲಿ ಧ್ವಜ ಸ್ತಂಭ ಸ್ಥಾಪನೆಗೆ ಅನುಮತಿ ಕೋರಿದ್ದ ಗೌರಿಶಂಕರ ಸೇವಾ ಟ್ರಸ್ಟ್‌, ಅದರಲ್ಲಿ ಯಾವ ಧ್ವಜ ಎಂಬುದನ್ನು ಉಲ್ಲೇಖಿಸಿರಲಿಲ್ಲ. ಧ್ವಜ ತೆರವು ಮಾಡುವುದಕ್ಕಾಗಿ ರಾಜ್ಯ ಸರ್ಕಾರವು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts