More

    ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕುರಿತು ಕೋರ್ಟ್​ ಹೇಳಿದ್ದೇನು? ಯಾರ ಪಾಲಾಯ್ತು?

    ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣವನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಬೇಕು ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

    ಇದನ್ನೂ ಓದಿ: ಹೊಸವರ್ಷದಲ್ಲಿ ಶೇ. 50ಕ್ಕಿಂತ ಹೆಚ್ಚು ಲಾಭ ಗಳಿಸಿದ ಷೇರುಗಳು! ವಿವರ ಇಲ್ಲಿದೆ..

    ಇದೇ ವೇಳೆ ಕೋರ್ಟ್, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ತಗಲುವ ವೆಚ್ಚಕ್ಕಾಗಿ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ತನ್ನ ತೀರ್ಪಿನಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಕರ್ನಾಟಕದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿದ್ದು, ಎಲ್ಲಾ ಸಂಬಂಧಿತ ಸಾಕ್ಷ್ಯಗಳನ್ನು ಪ್ರಸ್ತುತ ನ್ಯಾಯಾಲಯದ ಕಸ್ಟಡಿಯ ಕರ್ನಾಟಕ ಖಜಾನೆಯಲ್ಲಿ ಇಡಲಾಗಿದೆ.

    ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ವಸ್ತುಗಳನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ಪ್ರಕರಣದ ಖರ್ಚಿನ ಪರಿಹಾರವಾಗಿ ನೀಡಬೇಕೆಂದು ಕೋರಿ ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ 32ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಎಚ್‌.ಎನ್. ಮೋಹನ್ ಅವರಿದ್ದ ಪೀಠವು ಮನವಿಯನ್ನು ತಿರಸ್ಕರಿಸಿದ್ದಾರೆ. ಬದಲಾಗಿ ಜಪ್ತಿ ಮಾಡಲಾಗಿರುವ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡಿ ಎಂಬ ತೀರ್ಪು ನೀಡಿದ್ದಾರೆ.

    ಪ್ರಕರಣದಲ್ಲಿ ಸಾಕ್ಷಿಯಾಗಿ ಪರಿಗಣಿಸಲಾಗಿದ್ದ ಚಿನ್ನ ಮತ್ತು ವಜ್ರಾಭರಣಗಳ ವಿಲೇವಾರಿ ಸೇರಿದಂತೆ ಮುಂದಿನ ಕ್ರಮದ ಜವಾಬ್ದಾರಿಯನ್ನು ತಮಿಳುನಾಡು ಸರ್ಕಾರಕ್ಕೆ ವಹಿಸಲಾಗಿದೆ. ಆಭರಣಗಳನ್ನು ಹರಾಜು ಹಾಕುವ ಬದಲು ತಮಿಳುನಾಡಿನ ಗೃಹ ಇಲಾಖೆಗೆ ಹಸ್ತಾಂತರಿಸುವ ಮೂಲಕ ಅಲ್ಲಿಗೆ ವರ್ಗಾಯಿಸುವುದೇ ಉತ್ತಮ ಎಂದು ವಿಶೇಷ ನ್ಯಾಯಾಲಯ ನ್ಯಾಯಧೀಶಕರು ಅಭಿಪ್ರಾಯಪಟ್ಟಿದ್ದಾರೆ.

    ಜಯಲಲಿತಾ ಅವರಿಂದ ವಶಪಡಿಸಿಕೊಂಡಿದ್ದ ವಸ್ತುಗಳು, ಆಸ್ತಿಗೆ ಅವರ ಕುಟುಂಬದವರು ಅರ್ಹರಲ್ಲ ಎಂದು ಈ ಹಿಂದೆ ಕೋರ್ಟ್ ಹೇಳಿತ್ತು. ಬೆಲೆಬಾಳುವ ವಸ್ತುಗಳನ್ನು ತಮಗೆ ಸೇರಬೇಕೆಂದು ಜಯಲಲಿತಾ ಅವರ ಸೊಸೆ ಜೆ. ದೀಪಾ ಮತ್ತು ಸೋದರಳಿಯ ಜೆ.ದೀಪಕ್ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ಕೋರ್ಟ್ ತಿರಸ್ಕರಿಸಿತ್ತು.

    ಜಯಲಲಿತಾಗೆ 4 ವರ್ಷ ಜೈಲು ಶಿಕ್ಷೆ, 100 ಕೋಟಿ ದಂಡ ವಿಧಿಸಿದ್ದ ಕೋರ್ಟ್: ಜಯಲಲಿತಾ ಅವರಿಗೆ 2014ರ ಸೆಪ್ಟೆಂಬರ್ 27 ರಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ದಂಡ ವಿಧಿಸಿ ಬೆಂಗಳೂರಿನ ವಿಶೇಷ ಕೋರ್ಟ್ ಆದೇಶ ನೀಡಿತ್ತು. ಜಯಲಲಿತಾ ಅವರಿಂದ ವಶಪಡಿಸಿಕೊಂಡ ಬೆಲೆಬಾಳುವ ವಸ್ತುಗಳನ್ನು ಸಾರ್ವಜನಿಕ ಹರಾಜಿನ ಮೂಲಕ ಆರ್‌ಬಿಐ ಅಥವಾ ಎಸ್‌ಬಿಐಗೆ ಮಾರಾಟ ಮಾಡಬೇಕೆಂದು ನಿರ್ದೇಶ ನೀಡಿತ್ತು. ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂತಲೂ ಹೇಳಿತ್ತು. ನ್ಯಾಯಾಲಯದ ಈ ನಿರ್ದೇಶನದ ಆಧಾರದ ಮೇಲೆ ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹಮೂರ್ತಿ ಅವರು ನಗರದ ಕೋರ್ಟ್ ಮೊರೆ ಹೋಗಿದ್ದರು.

    ಮೇಲುಕೋಟೆ: ಅಕ್ಕ..ಅಕ್ಕ ಅಂತಾನೇ ಶಿಕ್ಷಕಿ ದೀಪಿಕಾ ಕೊಲೆ ಮಾಡಿದ್ನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts