More

    ಆದಾಯ ಇಲ್ಲದೆ ಜನ ಸಂಕಷ್ಟದಲ್ಲಿದ್ದಾರೆ, ಜೀವನ ವೆಚ್ಚ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳಿ- ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ

    ಬೆಂಗಳೂರು: ಆದಾಯ ಇಲ್ಲದ ಕಾರಣ ಜನ ಜೀವನ ಅಸ್ತವ್ಯಸ್ತವಾಗತೊಡಗಿದೆ. ವೆಚ್ಚ ಕಡಿತದ ಕಡೆಗೆ ಎಲ್ಲರೂ ಗಮನಹರಿಸುತ್ತಿದ್ದಾರೆ. ಉದ್ಯೋಗಿಗಳ ವೇತನದಲ್ಲೂ ಕಡಿತವಾಗತೊಡಗಿದ್ದು, ರೈತರು, ಅಸಂಘಟಿತ ವಲಯದ ಕಾರ್ಮಿಕರು ಎಲ್ಲರ ಬದುಕೂ ಅಪಾಯದಲ್ಲಿದೆ. ಇಂತಹ ಸನ್ನಿವೇಶದಲ್ಲಿ ಸರ್ಕಾರ ಕೂಡಲೇ ಜೀವನ ವೆಚ್ಚ ತಗ್ಗಿಸುವುದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಮಾಡಿರುವ ಸರಣಿ ಟ್ವೀಟ್​ನ ವಿವರ ಇಲ್ಲಿದೆ.

    ” ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.

    ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ.

    ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ”.

    ಅಕ್ಷಯ ತೃತೀಯಕ್ಕೆ ಬೆಂಗಳೂರಿನಲ್ಲಿ ಎಷ್ಟಾಯಿತು ವಹಿವಾಟು: ಆನ್​ಲೈನ್​ ನಲ್ಲೂ ನಡೆದಿತ್ತು ವ್ಯಾಪಾರ

    VIDEO: ನಿಯಮ ಉಲ್ಲಂಘಕರ ಕ್ವಾರಂಟೈನ್ ಹೋಮ್​ ಯಾವುದೆಂದು ತಿಳಿದರೆ ಬೆಚ್ಚಿ ಬೀಳೋದು ಗ್ಯಾರೆಂಟಿ !: ಸ್ಥಳೀಯ ರಾಜಕಾರಣಿಯೊಬ್ಬರ ಕ್ರಮ ಇದೀಗ ಜಗದ ಮನೆಮಾತು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts