ಮಾಜಿ ಸಿಎಂ, ಹಿರಿಯ ರಾಜಕಾರಣಿ SM Krishna ಆಸ್ಪತ್ರೆಗೆ ದಾಖಲು

SM krishna
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮುತ್ಸದಿ ರಾಜಕಾರಣಿ ಎಸ್​.ಎಂ. ಕೃಷ್ಣ (SM Krishna) ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ (Manipal Hospital) ಅವರನ್ನು ದಾಖಲಿಸಲಾಗಿದೆ.

92 ವರ್ಷದ ಎಸ್​.ಎಂ. ಕೃಷ್ಣ (SM Krishna) ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್.​ಎಂ. ಕೃಷ್ಣ (Sm Krishna) ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಉಸಿರಾಟದ ಸಮಸ್ಯೆಯಿಂದ ಹಿರಿಯ ರಾಜಕಾರಣಿ ಎಸ್​.ಎಂ. ಕೃಷ್ಣ (SM Krishna) ಅವರು ಬಳಲುತ್ತಿದ್ದು, ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ವಿವಿಧ ಪಕ್ಷಗಳ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net