More

    ವರುಣದಲ್ಲಿ ಸಿದ್ದರಾಮಯ್ಯಗೆ ಆತಂಕ ಶುರು: ಬದಲಾದ ಸಿದ್ದು ಲೆಕ್ಕಾಚಾರ

    ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯ ಜೀವನ ಆರಂಭಿಸಿದ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿದಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ. ಹೀಗಾಗಿ ವರುಣದಲ್ಲಿ ಪ್ರಬಲ ಪೈಪೋಟಿ ಏರ್ಪಟ್ಟಿದ್ದು, ಈ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ.

    ವರುಣ ಕ್ಷೇತ್ರ ನನ್ನ ತವರು ಕ್ಷೇತ್ರ. ಅಲ್ಲಿನ ಜನರು ನನ್ನನ್ನು ಗೆದ್ದೇ ಗೆಲ್ಲಿಸುತ್ತಾರೆ. ಹೀಗಾಗಿ ನಾನು ಹೆಚ್ಚಿಗೆ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದು ಇದುವರೆಗೂ ಹೇಳಿಕೊಂಡಿದ್ದ ಸಿದ್ದರಾಮಯ್ಯಗೆ ಇದೀಗ ಆತಂಕ ಶುರುವಾಗಿದೆ.

    ಬದಲಾದ ಲೆಕ್ಕಾಚಾರ

    ವರುಣ ಕಣಕ್ಕೆ ವಿಜಯೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್ ಆಗಮನದಿಂದ ಸಿದ್ದರಾಮಯ್ಯ ಲೆಕ್ಕಾಚಾರ ಬದಲಾಗಿದೆ. ಆರಂಭದಲ್ಲೇ ವರುಣ ವಿಧಾನಸಭಾ ವ್ಯಾಪ್ತಿಯಲ್ಲಿ ಸಿದ್ದು ಪ್ರಚಾರ ಭರದಿಂದ ಸಾಗಿದೆ. ಬೆಳಗ್ಗೆಯಿಂದ ರಾತ್ರಿಯವರೆಗೂ ಸಿದ್ದರಾಮಯ್ಯ ಪ್ರಚಾರ ಮಾಡುತ್ತಿದ್ದಾರೆ.

    ಇದನ್ನೂ ಓದಿ: ಯುಪಿಐಗೆ ಸಂದ ಜಯ: ಡಿಜಿಟಲ್ ಪಾವತಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

    ಪದೇಪದೆ ವರುಣ ಕಡೆ ಮುಖ

    ನಾಮಪತ್ರ ಸಲ್ಲಿಕೆ ಮಾತ್ರ, ಪ್ರಚಾರಕ್ಕೆ ಬರುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದರು. ನಂತರ ಒಂದು ದಿನ ಪ್ರಚಾರ ಮಾಡುವೆ ಎಂದಿದ್ದರು. ಕೊನೆಗೆ ಎರಡು ದಿನ ಕ್ಷೇತ್ರ ಸಂಚಾರ ಮಾಡಲು ತೀರ್ಮಾನ ಮಾಡಿದ್ದರು. ಆದರೆ, ಸಿದ್ದು ಲೆಕ್ಕಾಚಾರವನ್ನು ಬಿಜೆಪಿ ವರಿಷ್ಠರು ಬುಡಮೇಲು ಮಾಡಿದ್ದಾರೆ. ಈಗ ಪದೇ ಪದೇ ವರುಣ ಕಡೆ ಮಾಜಿ ಸಿಎಂ ಹೆಚ್ಚಾಗಿ ಮುಖ ಮಾಡುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

    ಹೊಟ್ಟೆಪಾಡಿಗಾಗಿ ಸಾಬೂನು ಮಾರಲು ಬಿಡದ ಕಾಮುಕರು: ವಿಡಿಯೋ ಮೂಲಕ ನಟಿ ಐಶ್ವರ್ಯಾ ಬೇಸರ

    ಹಿಂದು ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ! ಕಾರಣ ಹೀಗಿದೆ….

    ಈದುಲ್ ಫಿತ್ರ್: ಉಪವಾಸಿಗನಿಗೆ ದೇವನ ಉಡುಗೊರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts