ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧನ

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಪುತ್ರ, ಮಾಜಿ ಶಾಸಕ ಎಂ.ಪಿ.ರವೀಂದ್ರ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.

ನಗರದ ವಿಕ್ರಮ್​ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 4.45 ಕ್ಕೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅಕ್ಟೋಬರ್​ 29 ರಂದು ರವೀಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹದಲ್ಲಿ ನಂಜು ಉಂಟಾಗಿ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದಾರೆ. ಎರಡು ದಿನಗಳಿಂದ ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ. ಕಿಡ್ನಿ ಸಮಸ್ಯೆಯೂ ಎದುರಾಗಿದ್ದು, ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ವೈದ್ಯ ಡಾ.ವಿಜಯಕುಮಾರ್ ಅಣ್ಣಯ್ಯ ರೆಡ್ಡಿ ಶುಕ್ರವಾರ ತಿಳಿಸಿದ್ದರು.

ವೈದ್ಯ ಡಾ.ಮಹಾಂತೇಶ್ ಮಾತನಾಡಿ, ತಜ್ಞರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ವಾಸಕೋಶ ಸೋಂಕು ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದರು.