More

    ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

    ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಸಿಬಿಐ ಬಂಧನಕ್ಕೆ ಒಳಗಾಗಿದ್ದರು. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ಏಕಸದಸ್ಯ ಪೀಠ ಇಂದು (ಮೇ30) ಜಾಮೀನು ಅರ್ಜಿ ನಿರಾಕರಿಸಿ ತೀರ್ಪು ಪ್ರಕಟಿಸಿದೆ.

    ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಉಪಮುಖ್ಯಮಂತ್ರಿಯಾಗಿದ್ದಾಗ ಸಿಸೋಡಿಯಾ 18 ಖಾತೆಗಳನ್ನು ಹೊಂದಿದ್ದರು. ಜಾಮೀನು ನೀಡಿದಲ್ಲಿ ಪೂರಕ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಅವರಿಗೆ ಜಾಮೀನು ನೀಡಲಾಗುವುದಿಲ್ಲ ಹೇಳಿದೆ.

    ಮನೀಶ್ ಸಿಸೋಡಿಯಾ ಸದ್ಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಕಳೆದ ಫೆಬ್ರವರಿ 26 ರಂದು ಸಿಬಿಐ ಬಂಧನಕ್ಕೊಳಗಾಗಿದ್ದರು. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts