

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಹಿಂದೆಯೇ ಸಂಘಟನಾ ವಿಷಯದಲ್ಲೂ ಹೊಸ ನೇಮಕ ಮಾಡಿರುವ ಬಿಜೆಪಿ, ಇದೀಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಚುಕ್ಕಾಣಿಯನ್ನು ಕರ್ನಾಟಕದ 'ಸಿಂಗಂ' ಕೈಗಿತ್ತಿದೆ.
ಹೌದು.. ಮಾಜಿ ಪೊಲೀಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಹೆಸರಾಗಿರುವ ಕೆ.ಅಣ್ಣಾಮಲೈ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುತ್ತಿದೆ ಎಂಬುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುತ್ತೋಲೆಯಲ್ಲಿ ಹೇಳಿದ್ದಾರೆ. ಈ ಹಿಂದೆ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದರು.