More

    ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಪ್ರವೀಣ್ ಸೂದ್

    ನವದೆಹಲಿ: ಕೇಂದ್ರೀಯ ತನಿಖಾ ದಳ(CBI)ದ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಆಗಿದ್ದ ಪ್ರವೀಣ್ ಸೂದ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಸಿಬಿಐ ಕೇಂದ್ರ ಕಚೇರಿಯಲ್ಲಿ ನಿರ್ಗಮಿತ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಪ್ರವೀಣ್ ಸೂದ್ ಅವರಿಗೆ ಉಸ್ತುವಾರಿಯನ್ನು ಹಸ್ತಾಂತರಿಸಿದರು. ಮುಂದಿನ ಎರಡು ವರ್ಷಗಳ ಕಾಲ ಅವರು ಈ ಸಿಬಿಐ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

    ಇದನ್ನೂ ಓದಿ: ಪೊಲೀಸ್ ಇಲಾಖೆಯನ್ನು ಹಸಿರೀಕರಣ ಮಾಡಲ್ಲ, ಸಂವಿಧಾನೀಕರಣ ಮಾಡುತ್ತೇವೆ; ಯತ್ನಾಳ್ ಹೇಳಿಕೆಗೆ ಟಾಂಗ್ ಕೊಟ್ಟ ಕಾಂಗ್ರೆಸ್

    ಹಿರಿಯ ಅಧಿಕಾರಿ ಪ್ರವೀಣ್ ಸೂದ್ 1986ನೇ ಬ್ಯಾಚ್​ನ ಕರ್ನಾಟಕ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಸಿಬಿಐ ನೂತನ ನಿರ್ದೇಶಕರ ಹುದ್ದೆಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಿ ಮೇ 14ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಸಮಿತಿ ಪ್ರವೀಣ್ ಸೂದ್ ಅವರ ಹೆಸರನ್ನು ಸಿಬಿಐ ನಿರ್ದೇಶಕ ಸ್ಥಾನಕ್ಕೆ ಅಂತಿಮಗೊಳಿಸಲಾಗಿತ್ತು.

    ಇದನ್ನೂ ಓದಿ: ಫ್ಯಾಷನ್ ಉದ್ಯಮಿಯೊಂದಿಗೆ ಎರಡನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ!

    2024ರ ಮೇ ನಲ್ಲಿ ನಿವೃತ್ತಿ ಆಗಬೇಕಾಗಿದ್ದ ಪ್ರವೀಣ್ ಸೂದ್, ಸಿಬಿಐ ನಿರ್ದೇಶಕ ಹುದ್ದೆ ವಹಿಸಿಕೊಂಡ ಹಿನ್ನೆಲೆಯಲ್ಲಿ 2025ರ ಮೇ ವರೆಗೂ ಮುಂದುವರಿಯಲಿದ್ದಾರೆ. ಸಿಬಿಐ ನಿರ್ದೇಶಕರ ಹುದ್ದೆಗೆ ಕರ್ನಾಟಕ ಕೇಡರ್ ಐಪಿಎಸ್‌ಗಳು ನೇಮಕ ಆದವರಲ್ಲಿ ಮೂರನೆಯವರು ಎಂಬ ಖ್ಯಾತಿಗೆ ಪ್ರವೀಣ್ ಸೂದ್ ಒಳಗಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts