

ಮಹರಾಷ್ಟ್ರ : ( Stone Pelting On Car ) ಎನ್‌ಸಿಪಿ (ಎಸ್‌ಪಿ) ನಾಯಕ ಮತ್ತು ಮಾಜಿ ಸಚಿವ ಅನಿಲ್ ದೇಶಮುಖ್ ಅವರ ವಾಹನದ ಮೇಲೆ ಮಂಗಳವಾರ ಬೆಳಗ್ಗೆ ನಾಗ್ಪುರ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಆದರೆ, ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರ್ಖೇಡ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಅನಿಲ್ ದೇಶಮುಖ್ ನಂತರ ಕಟೋಲ್‌ಗೆ ಮರಳಿದರು. ಮಾರ್ಗಮಧ್ಯೆ ಜಲಖೇಡ ರಸ್ತೆಯ ಬೆಲ್ಫಾಟ ಬಳಿ ಅನಿಲ್ ದೇಶಮುಖ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ದಾಳಿಯ ದುಷ್ಕರ್ಮಿಗಳನ್ನು ಗುರುತಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಾಗ್ಪುರ ಗ್ರಾಮಾಂತರ ಎಸ್ಪಿ ಹರ್ಷ್ ಪೊದ್ದಾರ್ ತಿಳಿಸಿದ್ದಾರೆ.
ಅನಿಲ್ ದೇಶಮುಖ್ ಅವರು ಈ ಹಿಂದೆ ಮಹಾರಾಷ್ಟ್ರದ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಅವರ ಪುತ್ರ ಸಲೀಲ್ ದೇಶಮುಖ್ ಪ್ರಸ್ತುತ ಕಟೋಲ್ ಕ್ಷೇತ್ರದಿಂದ ಎನ್‌ಸಿಪಿ (ಎಸ್‌ಪಿ) ಪರವಾಗಿ ಸ್ಪರ್ಧಿಸುತ್ತಿದ್ದಾರೆ.