More

    ಕರೊನಾಗೆ ಮತ್ತೊಬ್ಬ ರಾಜಕಾರಣಿ ಬಲಿ: ಮಾಜಿ ಸಚಿವ ಕೆ.ಬಿ. ಶಾಣಪ್ಪ ಇನ್ನಿಲ್ಲ

    ಬೆಂಗಳೂರು: ರಾಜ್ಯದಲ್ಲಿ ಕರೊನಾ ಹಾವಳಿ ಕೈಮೀರಿದ್ದು, ಸೋಂಕಿನ ಪ್ರಕರಣಗಳ ಜತೆಗೆ ಸೋಂಕಿನಿಂದಾಗಿ ಸಾಯುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅಂಥ ಕರೊನಾಗೆ ಇದೀಗ ಮತ್ತೊಬ್ಬ ರಾಜಕಾರಣಿ ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಮಾಜಿ ಸಂಸದ, ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರು ಇಂದು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳ ಹಿಂದೆ ಕರೊನಾ ಸೋಂಕಿಗೆ ಒಳಗಾಗಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದರು.

    ಜನತಾ ಪರಿವಾರದ ನಾಯಕ ಎಂದೇ ಖ್ಯಾತಿ ಪಡೆದಿದ್ದ ಶಾಣಪ್ಪ ಅವರು ಜೆ.ಎಚ್. ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಬಳಿಕ ಬಿಜೆಪಿಗೆ ಸೇರಿದ್ದ ಶಾಣಪ್ಪ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಲಾಗಿತ್ತು. ನಂತರ ಅವರು ವಿಧಾನ ಪರಿಷತ್​ಗೂ ನಾಮನಿರ್ದೇಶನಗೊಂಡಿದ್ದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಕಾಂಗ್ರೆಸ್​ಗೆ ಸೇರಿದ್ದರು.

    ಮುಖ್ಯಮಂತ್ರಿ ಸಂತಾಪ

    ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಾಣಪ್ಪ ಅವರು ಕಾರ್ಮಿಕ ನಾಯಕರಾಗಿ, ಶಹಾಬಾದ್ ಶಾಸಕರಾಗಿ, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಗೆ ಸೇರಿ ರಾಜ್ಯಸಭಾ, ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ನೊಂದ ಜನರ ಅವರು ಸದನದಲ್ಲಿ ದನಿಯಾಗಿದ್ದರು. ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ನಡವಳಿಕೆಯ ನಾಯಕನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.

    ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

    ‘ತಂದೆ ಕಾಣೆಯಾಗಿದ್ದಾರೆ, ಹುಡುಕಿಕೊಡಿ ಪ್ಲೀಸ್​.. ಲಾಕ್​ಡೌನ್​ನಿಂದ ಹೊರಗೆ ಹೋಗಲಾಗುತ್ತಿಲ್ಲ, ಸಹಾಯ ಮಾಡಿ: ಪುತ್ರನ ವಿನಂತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts