

ಬೆಂಗಳೂರು: ಮರಳು ದಂಧೆ ತಡೆಯಲು ಮುಂದಾಗಿದ್ದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹಾಯಿಸಿ ಹತ್ಯೆ ಮಾಡಿರುವ ದುರದಘಟನೆ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿರುವುದು ಕಳವಳಕಾರಿಯಾಗಿದ್ದು, ರಾಜ್ಯದಲ್ಲಿ ಗುಂಡಾಗಿರಿ ಪರ್ವ ಶುರುವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಜನರು ಬಡಿಗೆ ಹಿಡೀತಾರೆ : ಶಾಸಕ ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಮರಳು ಮಾಫಿಯಾವು ಪೊಲೀಸ್ ಪೇದೆಯನ್ನು ಬಲಿ ತೆಗೆದುಕೊಂಡಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಹಿಂದೆ ಪೊಲೀಸರೇ ಹುಷಾರ್ ಎಂದು ಎಚ್ಚರಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೂಂಡಾಗಿರಿ ಶುರುವಾಯಿತೆಂದೇ ಅರ್ಥ ಎಂದು ಹೇಳಿದರು.
ಶಾಮಿಯಾನ ಕೊಡುತ್ತೇವೆ:
ಕೇಂದ್ರ ಸರ್ಕಾರದ ವಿರುದ್ಧ ಜೂ.20ರಂದು ಕಾಂಗ್ರೆಸ್ನವರು ಹೋರಾಟಕ್ಕೆ ಮುಂದಾಗಿದ್ದಾರೆ. ಅಗತ್ಯಬಿದ್ದರೆ ಶಾಮಿಯಾನ ಒದಗಿಸುತ್ತೇವೆ. ಆರಾಮವಾಗಿ ಚಳವಳಿ ಮಾಡಲಿ. ಗ್ಯಾರಂಟಿಗಳನ್ನು ಕೊಟ್ಟಿರುವುದು ಕಾಂಗ್ರೆಸ್ ಪಕ್ಷ, ಕೇಂದ್ರ ಸರ್ಕಾರವಲ್ಲ. ನಿಮ್ಮ ಅಸಹಾಯಕತೆಯನ್ನು ಕೇಂದ್ರದ ಮೇಲೆ ಎತ್ತಿ ಹಾಕುತ್ತಿರುವುದೇಕೆ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಹಸಿಬಿಸಿ ದೃಶ್ಯಗಳಲ್ಲಿ ತಮನ್ನಾ ನಟನೆ: ಜಾಲತಾಣದಲ್ಲಿ ವಿಡಿಯೋ ವೈರಲ್, ಮಿಲ್ಕಿ ಬ್ಯೂಟಿ ವಿರುದ್ಧ ಕೆಂಡಕಾರಿದ ಫ್ಯಾನ್ಸ್
ಎಚ್ಚರಿಕೆ:
ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಹೊರಟಿದೆ. ಕಾಂಗ್ರೆಸ್ ಪಕ್ಷವು ಪಿಎಫ್‍ಐ, ಕೆಎಫ್‍ಡಿ ಪರವಾಗಿದೆಯೇ? ಎಂದು ಪ್ರಶ್ನಿಸಿದರು. ಈ ರೀತಿ ಜನಾದೇಶದ ದುರ್ಬಳಕೆಗೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಆರ್.ಅಶೋಕ್ ಎಚ್ಚರಿಸಿದರು.(ಏಜೆನ್ಸೀಸ್)