ಹುಟ್ಟುಹಬ್ಬದ ದಿನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೆ

Vinay Kulakarni in cbi custody
Published on

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಇಂದು ಬೆಳಗ್ಗೆ ಸಿಬಿಐ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ.

ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ತೆರಳಿ, ಅಲ್ಲಿದ್ದ ವಿನಯ್ ಕುಲಕರ್ಣಿ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ಕರೆದೊಯ್ದರು. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. 55ನೇ ಹುಟ್ಟುಹಬ್ಬದ ದಿನವೇ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೊಳಪಟ್ಟಿದ್ದಾರೆ.

ಆರೋಪಿ ವಿನಯ್​ ಕುಲಕರ್ಣಿಯನ್ನು ಹೆಚ್ಚಿನ ತನಿಖೆಗಾಗಿ ತನ್ನ ಕಸ್ಟಡಿಗೆ ನೀಡುವಂತೆ ಸಿಬಿಐ ಅಧಿಕಾರಿಗಳು ಶುಕ್ರವಾರ ಕೋರ್ಟ್​ಗೆ ಮನವಿ ಮಾಡಿದ್ದರು. ಸಿಬಿಐ ಅರ್ಜಿಗೆ ವಿನಯ್​ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಬೆಳಗ್ಗೆ ವಾದ-ವಿವಾದ ಆಲಿಸಿದ್ದ ನ್ಯಾಯಾಲಯ, ತೀರ್ಪು ಕಾಯ್ದಿರಿಸಿತ್ತು. ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ವಿನಯ್​ ಕುಲಕರ್ಣಿಯನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡುವಂತೆ ಸೂಚಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net