ಮಾಜಿ ಶಾಸಕರ ಪತ್ನಿ ಚಲಾಯಿಸುತ್ತಿದ್ದ ಕಾರ್ ಅಪಘಾತ; ಪತಿಗೆ ಗಾಯ...

Accident
Published on

ಬೆಂಗಳೂರು: ಮಾಜಿ ಶಾಸಕರ ಪತ್ನಿ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮಾಜಿ ಶಾಸಕರು ಗಾಯಗೊಂಡಿದ್ದಾರೆ. ಬೆಂಗಳೂರಿನ ಸಂಜಯನಗರದ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ವಿಕ್ರಮ್​ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಮಾಜಿ ಶಾಸಕ ಅನಿಲ್ ಲಾಡ್ ಹಾಗೂ ಅವರ ಪತ್ನಿ ಆರತಿ ಭಾನುವಾರ ಗೆಳೆಯನ ಮನೆಗೆ ತೆರಳಿದ್ದರು. ಅಲ್ಲಿಂದ ತಮ್ಮ ರೇಂಜ್​ ರೋವರ್ ಕಾರಿನಲ್ಲಿ ಮರಳುವಾಗ ನಸುಕಿನ ಜಾವ ಮೂರು ಗಂಟೆಗೆ ಸಂಜಯನಗರ ಸಿಗ್ನಲ್​ನಲ್ಲಿ ಅಪಘಾತ ಸಂಭವಿಸಿದೆ. ಆರತಿ ಅವರು ತಿರುವು ತೆಗೆದುಕೊಳ್ಳುತ್ತಿರುವಾಗ ಆಯತಪ್ಪಿ ಕಾರು ಮರಕ್ಕೆ ಗುದ್ದಿದೆ. ಆರತಿ ಅವರು ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿ ಆಗುತ್ತಿದ್ದಂತೆ ಕಾರಿನ ಏರ್​ ಬ್ಯಾಗ್ ತೆರೆದುಕೊಂಡಿದ್ದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಆದರೂ ಅನಿಲ್​ ಲಾಡ್​ಗೆ ಸ್ವಲ್ಪ ಗಾಯಗಳಾಗಿದ್ದು, ಅಪಘಾತ ಸಂಭವಿಸಿದ ತಕ್ಷಣ ರಾಮಯ್ಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್​.ಟಿ.ನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net