ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ; ಸಿಎಂ ಸಂತಾಪ

shivalinga
Published on

ಬೆಂಗಳೂರು: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನರಾಗಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿವ ಮೂಲಕ ಸಂತಾಪ ಸೂಚಿಸಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಸರಳ‌ ಸಜ್ಜನಿಕೆಯ ವ್ಯಕ್ತಿ ಎಂದು ತಮ್ಮ ಟ್ವೀಟ್​ನಲ್ಲಿ ಮುಖ್ಯಮಂತ್ರಿ ಸ್ಮರಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ತಮ್ಮ ಟ್ವೀಟ್​ನಲ್ಲಿ ಮುಖ್ಯಮಂತ್ರಿಗಳು 'ಮಾಜಿ ಶಾಸಕರು ಹಾಗೂ ನನ್ನ ಆತ್ಮೀಯರಾಗಿದ್ದ ಶ್ರೀ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಎಂದು ತಿಳಿದು ಅತ್ಯಂತ ದುಃಖವಾಯಿತು.

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net