More

    ಮಾಜಿ ಶಾಸಕ ಗವಿಯಪ್ಪ ಕಾಂಗ್ರೆಸ್ ಸೇರ್ಪಡೆಗೆ ಗ್ರೀನ್ ಸಿಗ್ನಲ್

    ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿರುವ ಮಾಜಿ ಶಾಸಕ ಎಚ್.ಆರ್.ಗವಿಯಪ್ಪ ಅವರ ಕಾಂಗ್ರೆಸ್ ಸೇರ್ಪಡೆಗೆ ಪಕ್ಷ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೆ.೯ ರಂದು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
    ೨೦೦೪ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿ, ವಿಧಾನಸಭೆ ಪ್ರವೇಶಿಸಿದ್ದ ಎಚ್.ಆರ್.ಗವಿಯಪ್ಪ, ೨೦೦೮ ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭಾವಗೊಂಡಿದ್ದರು. ೨೦೧೮ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆನಂದ ಸಿಂಗ್ ವಿರುದ್ಧ ಬಿಜೆಪಿ ಉಮೇದುದಾರರಾಗಿ ಅಲ್ಪ ಅಂತರದಲ್ಲಿ ಗವಿಯಪ್ಪ ಸೋಲನುಭವಿಸಿದರು. ಆನಂತರ ಬಿಜೆಪಿಯಲ್ಲಿದ್ದರೂ ತಟಸ್ಥರಾಗಿದ್ದ ಗವಿಯಪ್ಪ ಈಗ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ.
    ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆ:
    ಸೆ.೯ ರಂದು ಬೆಳಗ್ಗೆ ೧೧ ಗಂಟೆಗೆ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಾಜಿ ಶಾಸಕ ಎಚ್.ಆರ್.ಗವಿಯಪ್ಪ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
    ಹೊಸಪೇಟೆಯಿಂದ ಬೆಂಗಳೂರಿಗೆ ಬೆಂಬಲಿಗರನ್ನು ಕರೆದೊಯ್ಯಲು ಟವೇರಾ, ಇನ್ನೋವಾ, ತೂಫಾನ್ ಸೇರಿದಂತೆ ವಿವಿಧ ಬಗೆಯ ಸುಮಾರು ೧೨೦ ವಾಹನಗಳ ವ್ಯವಸ್ಥೆ ಮಾಡಿದ್ದು, ಇಲ್ಲಿನ ದೀಪಾಯನ ಶಾಲಾ ಮುಂಭಾಗದಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಇಂದು ಸಂಜೆ ವೇಳೆ ಪ್ರಯಾಣಿಸಲಿವೆ ಎನ್ನಲಾಗಿದೆ. ಮಾಜಿ ಶಾಸಕ ಎಚ್.ಆರ್.ಗವಿಯಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಚೈತನ್ಯ ಮೂಡಲಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts