25.1 C
Bangalore
Friday, December 6, 2019

ಗೋಪಾಲ ಭಂಡಾರಿ ಪಂಚಭೂತಗಳಲ್ಲಿ ಲೀನ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಕಾರ್ಕಳ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಹುತ್ತುರ್ಕೆ ಗೋಪಾಲ ಭಂಡಾರಿ ಅವರ ಅಂತ್ಯಸಂಸ್ಕಾರ ಹುಟ್ಟೂರು ಹೆಬ್ರಿಯ ಹುತ್ತುರ್ಕೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಮಧ್ಯಾಹ್ನ ನೆರವೇರಿತು.
ಗುರುವಾರ ಬೆಂಗಳೂರಿನಿಂದ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ ಬರುತ್ತಿದ್ದಾಗ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದರು. ಅವರ ಪಾರ್ಥೀವ ಶರೀರವನ್ನು ವೆನ್ಲಾಕ್ ಆಸ್ಪತ್ರೆಯಿಂದ ಶುಕ್ರವಾರ ಬೆಳಗ್ಗೆ 10.30ರ ವೇಳೆಗೆ ಆಂಬುಲೆನ್ಸ್ ಮೂಲಕ ಕಾರ್ಕಳಕ್ಕೆ ತಂದು ಕಿಸಾನ್ ಸಭಾ ಟ್ರಸ್ಟ್‌ನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಹೊರಾಂಗಣದ ಸಭಾಂಗಣದಲ್ಲಿ ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಮಂದಿ ಸರತಿ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆದರು.

ಪಾರ್ಥಿವ ಶರೀರವನ್ನು ಕಾರ್ಕಳಕ್ಕೆ ತರುತ್ತಿದ್ದಂತೆ ಕಾರ್ಕಳದ ಎಲ್ಲ ವರ್ತಕರು ಅಂಗಡಿ, ಮಳಿಗೆಗಳನ್ನು ಮುಚ್ಚಿ ಗೌರವ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಕಾರ್ಕಳ ಎಎಸ್ಪಿ ಕೃಷ್ಣಕಾಂತ್ ನೇತೃತ್ವದಲ್ಲಿ ಪೊಲೀಸ್ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವೆ ಜಯಮಾಲ, ಶಾಸಕ ಸುನೀಲ್ ಕುಮಾರ್, ಮಾಜಿ ಸಚಿವರಾದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ಅಮರನಾಥ ಶೆಟ್ಟಿ, ಅಭಯಚಂದ್ರ ಜೈನ್, ಪ್ರಮುಖರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಶಶಿಧರ್ ಹೆಗ್ಡೆ, ಎಂ.ಎ.ಗಫೂರ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಅಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ, ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಅಧ್ಯಕ್ಷ ವಂ.ಜಾರ್ಜ್ ಡಿಸೋಜ, ಬಲ್ಯೊಟ್ಟು ಮಠದ ಶ್ರೀ ವಿಖ್ಯಾತನಂದ ಸ್ವಾಮಿ, ಬಜರಂಗದಳ ರಾಜ್ಯ ಸಂಚಾಲಕ ಕೆ.ಆರ್.ಸುನೀಲ್ ಮೊದಲಾದವರು ಅಂತಿಮ ದರ್ಶನ ಪಡೆದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಗೋಪಾಲ ಭಂಡಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಮುಖರಾದ ಬಿ.ಕೆ.ಹರಿಪ್ರಸಾದ್, ತನ್ವೀರ್ ಸೇಠ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮತ್ತಿತತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಶಾಸಕ ಗೋಪಾಲ ಭಂಡಾರಿಯವರ ಅನಿರೀಕ್ಷಿತ ಸಾವು ನನಗೆ ಆಘಾತವನ್ನುಂಟು ಮಾಡಿದೆ. ರಾಜಿ ಇಲ್ಲದ ಸೈದ್ಧಾಂತಿಕ ಬದ್ಧತೆ, ಪ್ರಾಮಾಣಿಕತೆ ಮತ್ತು ಸಜ್ಜನಿಕೆಯ ಸಾಕಾರ ರೂಪದಂತಿದ್ದ ಗೋಪಾಲ ಭಂಡಾರಿ ವೈಯಕ್ತಿಕವಾಗಿ ನನಗೆ ಆತ್ಮೀಯರಾಗಿದ್ದವರು. ಅವರನ್ನು ಕಳೆದುಕೊಂಡಿರುವ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.
| ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...