ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಯಾದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್​

KBP
Published on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯೆ ಪಕ್ಷಾಂತರ ಪರ್ವ ಕೂಡ ಜೋರಾಗಿದೆ.

ಟಿಕೆಟ್​ ಸಿಗದೆ ಇರುವ ಆಕಾಂಕ್ಷಿಗಳು ಬೇರೆ ಪಕ್ಷಗಳತ್ತ ಮುಖ ಮಾಡುವುದು ಸಾಮಾನ್ಯವಾಗಿದ್ದು ಈ ನೆಲೆಯಲ್ಲಿ ಕಾಂಗ್ರೆಸ್​ಗೆ ಮತ್ತೊಂದು ಆಘಾತ ಎದುರಾಗಿದೆ.

ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆ

ಇನ್ನು ತಮಗೆ ಕಾಂಗ್ರೆಸ್​ ಪಕ್ಷದಿಂದ ಟಿಕೆಟ್​ ಸಿಗದ ಕಾರಣ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್​ ಜೆಡಿಎಸ್​ ಸೇರಿದ್ಧಾರೆ.

KBP (1)

ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹಾಗೂ ಪಕ್ಷದ ವರಿಷ್ಠ ಎಚ್​.ಡಿ.ದೇವೇಗೌಡ ಸಮ್ಮುಖದಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ.

ಟಿಕೆಟ್​ಗಾಗಿ ಕಸರತ್ತು

ಇನ್ನು ತಮಗೆ ಕಾಂಗ್ರೆಸ್​ ಪಕ್ಷದಿಂದ ಟಿಕೆಟ್​ ಸಿಗದ ಹಿನ್ನಲೆಯಲ್ಲಿ ಬೇಸರಗೊಂಡಿದ್ದ ಪ್ರಸನ್ನ ಕುಮಾರ್​ ಜೆಡಿಎಸ್​ ಪಕ್ಷದಿಂದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು. ಆದರೆ, ಟಿಕೆಟ್​ ಅಂತಿಮ ಕ್ಷಣದಲ್ಲಿ ಆಯನೂರು ಮಂಜುನಾಥ್​ ಪಾಲಾದ ಕಾರಣ ಪ್ರಸನ್ನ ಕುಮಾರ್​ ಬಿ ಫಾರಂ ಪಡೆಯುವಲ್ಲಿ ವಿಫಲರಾಗಿದ್ದರು. ​

ಜೆಡಿಎಸ್​ನಲ್ಲಿ ಟಿಕೆಟ್​ ಸಿಗದ ಮುನಿಸಿನ ನಡುವೆಯೂ ಪಕ್ಷದ ಅಭ್ಯರ್ಥಿ ಆಯನೂರು ಮಂಜುನಾಥ್​ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ್​ ಪ್ರಸನ್ನ ಕುಮಾರ್​ ಅವರ ಮನವೊಲಿಸಿ ಜೆಡಿಎಸ್​ ಪಕ್ಷಕ್ಕೆ ಕರೆತಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net