More

    24 ಗಂಟೆಯೊಳಗೆ ನಿವೃತ್ತಿ ಘೋಷಿಸದಿದ್ದರೆ ಭಟ್​ ವಿರುದ್ಧ ಕ್ರಮ

    ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ರಘುಪತಿ ಭಟ್​ 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲವಾದರೆ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನಿಲ್​ ಕುಮಾರ್​ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಕ್ರಮ ಕೈಗೊಳ್ಳುತ್ತೇವೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪರಿಶ್ರಮ ಪಡುತ್ತೇವೆ. ಯಾರ ಬಗ್ಗೆಯೂ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ನಮ್ಮ ವಿನಂತಿಯನ್ನು ಅವರು ಮನ್ನಿಸುತ್ತಾರೆ ಎಂಬ ವಿಶ್ವಾಸವಿದೆ. ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧೆ ಮಾಡಿದರೆ ಕ್ರಮ ಖಚಿತ ಎಂದರು.

    ಎನ್​ ಡಿ ಎ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನ ನಡೆಯುತ್ತಿದ್ದು, ಕಾರ್ಯಕರ್ತರನ್ನು ಸಕ್ರಿಯಗೊಳಿಸಿದ್ದೇವೆ. ಕರಾವಳಿಗೆ ಅನ್ಯಾಯವಾಗಿದೆ ಎಂಬ ವಿಚಾರದ ಬಗ್ಗೆ ಅಭ್ಯರ್ಥಿಯ ಘೋಷಣೆಯಾದ ಮೇಲೆ ಚರ್ಚೆ ಇಲ್ಲ. ಪಕ್ಷದ ಹೈಕಮಾಂಡ್​ ರ್ನಿಣಯ ತೆಗೆದುಕೊಂಡಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ. ಕರಾವಳಿಗೆ ಅನ್ಯಾಯ ಆಗಿದೆ ಎಂಬ ಭಾವನೆಗಳಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಸರಿಪಡಿಸಬಹುದು. ಈ ಕಾರಣಕ್ಕೆ ಪಕ್ಷಕ್ಕೆ ಮುಜುಗರ ಮಾಡಬಾರದು ಎಂದರು.

    ವಿನಾ ಕಾರಣ ರಾಜಕೀಯ ದ್ವೇಷ
    ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾ ವಿಷಯದಲ್ಲಿ ವಿನಾಕಾರಣ ರಾಜಕೀಯ ದ್ವೇಷ ಇಟ್ಟುಕೊಂಡು ಬಂಧನ ಮಾಡುವ ಹುನ್ನಾರ ನಡೆಸಿರುವುದು ಸರಿಯಲ್ಲ. ಪೊಲೀಸರು ಜನಸಾಮಾನ್ಯರಿಗೆ ರಕ್ಷಣೆ ನೀಡಬೇಕು. ಆದರೆ ಅವರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ದೊಡ್ಡ ಪ್ರಮಾಣದ ಮಾರಕ. ಕಾನೂನು ಉಲ್ಲಂಘಿಸುವಂತ ಯಾವುದೇ ಟನೆ ಬೆಳ್ತಂಗಡಿಯಲ್ಲಿ ನಡೆದಿರಲಿಲ್ಲ. ನಾವು ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಮುಂದಿನ ವಾರ ಗೃಹಸಚಿವರನ್ನು ಭೇಟಿ ಮಾಡಿ ಸ್ಥಳಿಯ ಪೊಲೀಸ್​ ಅಧಿಕಾರಿಗಳು ಯಾಕೆ ಈ ರೀತಿ ಕ್ರಮಕ್ಕೆ ಮುಂದಾಗಿದ್ದಾರೆ ಮತ್ತು ಜಿಲ್ಲೆಯ ಶಾಂತಿ ಕದುಡುವ ಪ್ರಯತ್ನ ಇಲಾಖೆಯಿಂದಲೇ ನಡೆಯುತ್ತಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಕೇಳುತ್ತೇವೆ. ವಿಧಾನಸಭೆ ಅಧಿವೇಶನದಲ್ಲಿ ನಿಶ್ಚಿತವಾಗಿ ಈ ವಿಷಯ ಪ್ರಸ್ತಾಪ ಮಾಡುತ್ತೇವೆ. ಶಾಸಕನ ಮೂಲಕ ಕಾರ್ಯಕರ್ತರನ್ನು ಬೆದರಿಸುವ ಪರೋಕ್ಷ$ವಾದ ಹುನ್ನಾರ ನಡೆಯುತ್ತಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts