ಸಿನಿಮಾ

ಉಡುಪಿ ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ (೭೧) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಬಡಗುಪೇಟೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಅವರು, ಪರಿಷತ್‌ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ನಂತರ ಕಾಂಗ್ರೆಸ್‌ನೊಂದಿಗೆ ಕೆಸಿಪಿ ವಿಲೀನಗೊಂಡಿತ್ತು, ಹೀಗಾಗಿ 1999ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು. 2004ರ ಚುನಾವಣೆಯಲ್ಲಿ ರಘುಪತಿ ಭಟ್ ವಿರುದ್ಧ ಪರಾಜಯಗೊಂಡಿದ್ದರು. ಇತ್ತೀಚೆಗೆ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ಮೀನುಗಾರರ ವಿಭಾಗ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು.

Latest Posts

ಲೈಫ್‌ಸ್ಟೈಲ್