ಮಾಜಿ ಶಾಸಕ ಸಂಭಾಜಿ ಪಾಟೀಲ ನಿಧನ

ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಎಂಇಎಸ್ ಮುಖಂಡ ಸಂಭಾಜಿ ಪಾಟೀಲ (68) ಅನಾರೋಗ್ಯದಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ತಪಾಸಣೆಗೆಂದು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಭಾಜಿ ಪಾಟೀಲ ಬೆಳಗಾವಿ ಮಹಾನಗರ ಪಾಲಿಕೆಗೆ 4 ಬಾರಿ ಮೇಯರ್ ಮತ್ತು ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಎಂಇಎಸ್ ಬೆಂಬಲಿತ ಅಭ್ಯರ್ಥಿಯಾಗಿ ಒಂದು ಬಾರಿ ಗೆಲುವು ದಾಖಲಿಸಿದ್ದರು.

ಹಿಡಕಲ್ ಜಲಾಶಯದಿಂದ ಬೆಳಗಾವಿ ನಗರಕ್ಕೆ ನೀರು ಪೂರೈಕೆ ಯೋಜನೆ ಅನುಷ್ಠಾನದಲ್ಲಿ ಇವರ ಕೊಡುಗೆ ಅಪಾರ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಾಟೀಲರ ಪುತ್ರ ರೈಲು ಅಪಘಾತದಲ್ಲಿ ಮೃತಪಟ್ಟಿದ್ದರು.

Leave a Reply

Your email address will not be published. Required fields are marked *