ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ ಭಟ್​ ನಿಧನ

Rama Bhat
Published on

ಮಂಗಳೂರು: ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ, ಜನಸಂಘದ ಪ್ರಭಾವಿ ನಾಯಕ ಉರಿಮಜಲು ಕೆ. ರಾಮ ಭಟ್ ಅವರು ಇಂದು ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಕರಾವಳಿ ಭಾಗದಲ್ಲಿ ಬಿಜೆಪಿಯ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಇವರಿಗೆ ವರ್ಷಗಳ ಹಿಂದೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.

ರಾಮ ಭಟ್​ ಅವರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 1977 ಹಾಗೂ 1983ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದರು. ಆ ನಂತರ ಕ್ರಮೇಣ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net