

ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರ ಮಾಜಿ ಕಾಂಗ್ರೆಸ್ ಶಾಸಕ ವಾಸು ನಿಧನರಾಗಿದ್ದಾರೆ. ದೀರ್ಘ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ.
ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಬಯಸಿದ್ದ ಅವರಿಗೆ ಪಕ್ಷ ಮಣೆ ಹಾಕಿರಲಿಲ್ಲ. ಅವರ ಬದಲಾಗಿ ಹರೀಶ್ ಗೌಡಾಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿತ್ತು.
ಟಿಕೆಟ್ ಕೈತಪ್ಪಿದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ವಾಸು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದರು. ಈಚೆಗೆ, ಲೋಕಸಭಾ ಚುನಾವಣೆ ಬಗ್ಗೆ ಪಕ್ಷದಿಂದ ಆಯೋಜಿಸಿದ್ದ ಪ್ರಮುಖರ ಸಭೆಯಲ್ಲಿ ಕಾಣಿಸಿಕೊಂಡಿದ್ದರು.