ಮಾಜಿ ಸಂಸದ, ಹಿರಿಯ ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ ನಿಧನ

DB Chandregowda
Published on

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಂಸದ ಡಿ.ಬಿ.ಚಂದ್ರೇಗೌಡ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ  ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  

ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು. 2014ರಿಂದ ಈಚೆಗೆ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

ಡಿ.ಬಿ.ಚಂದ್ರೇಗೌಡ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net