More

    ಗೋಹತ್ಯೆ ನಿಷೇಧಿಸಿದ್ರೆ ಸಮಾಜದಲ್ಲಿ ಅಶಾಂತಿ, ಜನರ ಬಾಳು ಅಲ್ಲೋಲ-ಕಲ್ಲೋಲ: ಎಚ್​.ಡಿ.ದೇವೇಗೌಡ

    ಬೆಂಗಳೂರು : ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಮಸೂದೆಯನ್ನು ವಿಧಾನ ಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ-ಕಲ್ಲೋಲ ಮಾಡಲು ಹೊರಟಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ ಕಾರಿದ್ದಾರೆ.

    ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಬಗ್ಗೆ 1964ರ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆ ನಿಬಂಧನೆ ಉಲ್ಲಂಘಿಸಿದವರ ಮೇಲೆ ವಿಧಿಸಬಹುದಾದ ದಂಡ, ಜುಲ್ಮಾನೆ ಮತ್ತು ಇತರೆ ದಂಡನೆ ಬಗ್ಗೆ ಅವಕಾಶವಿದೆ. 2010ರಲ್ಲೂ ಕಾಯ್ದೆ ಬದಲಾವಣೆ ಮಾಡಲು ಆಗಿನ ಬಿಜೆಪಿ ಸರ್ಕಾರ ಯತ್ನಿಸಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಆಗಲೂ ಜತೆಯಾಗಿ ವಿರೋಧಿಸಿದ್ದವು. ತಾವು ರಾಜ್ಯಪಾಲರು ಮತ್ತು ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ ಬಳಿಕ ಸ್ಪಷ್ಟನೆ ಕೇಳಿದ್ದರು.

    ಇದನ್ನೂ ಓದಿ: ನಿತ್ಯಭವಿಷ್ಯ| ಈ ರಾಶಿಯ ಪ್ರೇಮಿಗಳಲ್ಲಿ ಇಂದು ವಿರಸ ಸಂಭವಿಸಬಹುದು..

    ಆ ಬಳಿಕ ಸರ್ಕಾರದ ನೇತೃತ್ವ ಬದಲಾಗಿದ್ದರಿಂದ ಈ ಮಸೂದೆಯನ್ನು ವಾಪಸ್ ಪಡೆದು ನಿಷ್ಕ್ರಿಯಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕವನ್ನು ಜಾತ್ಯತೀತ ಜನತಾದಳ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    FACT CHECK | ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಿದ್ರಾ- ಏನೀ ವಿಡಿಯೋದ ಮರ್ಮ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts