ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಿವೃತ್ತ ಪಿಎಸ್ಐ ಅರೆಸ್ಟ್​

harassment
Published on

ಬೆಂಗಳೂರು: ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿವಾಜಿನಗರ ಪೊಲೀಸರು ನಿವೃತ್ತ ಪಿಎಸ್​ಐನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ನಿವೃತ್ತ ಪಿಎಸ್​ಐ ಅಬ್ದುಲ್​ ಹಫೀಜ್​(74) ಬಂಧಿತರೆಂದು ಎಂದು ತಿಳಿದು ಬಂದಿದ್ದು, ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಹಾಗೂ ಸಂತ್ರಸ್ತೆಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಕೃತ್ಯದ ಕುರಿತು ಸಂತ್ರಸ್ತೆಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net