More

    ಶಿವಮೊಗ್ಗ ಜಿಲ್ಲೆಯ 35 ಕೇಂದ್ರಗಳಲ್ಲಿ ಪರೀಕ್ಷೆ

    ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅ.28 ಹಾಗೂ 29ರಂದು ಅಭ್ಯರ್ಥಿಗಳಿಗಾಗಿ ಪರೀಕ್ಷೆ ನಿಗದಿಪಡಿಸಿದ್ದು, ಜಿಲ್ಲೆಯ ಮೂರು ತಾಲೂಕುಗಳ 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಎಂಎಸ್‌ಐಎಲ್ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ನೇಮಕಾತಿಗೆ ಈ ಪರೀಕ್ಷೆ ನಡೆಸಲಾಗುತ್ತಿದೆ.
    ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಬುಧವಾರ ಪೂರ್ವ ಸಿದ್ದತಾ ಸಭೆ ನಡೆಸಿದರು. ಪ್ರತಿ ಕೇಂದ್ರಕ್ಕೆ ವೀಕ್ಷಕರಾಗಿ ಎ ಶ್ರೇಣಿಯ ಅಧಿಕಾರಿಯನ್ನು, ಪ್ರಶ್ನೆ ಪತ್ರಿಕಾ ಪಾಲಕರನ್ನಾಗಿ ಓರ್ವ ಪ್ರಾಚಾರ್ಯರನ್ನು ಹಾಗೂ ಓರ್ವ ಉಪನ್ಯಾಸಕರನ್ನು ಜಾಗೃತದಳದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರಗಳ ನಿರ್ವಹಣೆಗೆ 10 ತ್ರಿಸದಸ್ಯ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
    ಕೇಂದ್ರದಲ್ಲಿ ನೀರು, ಗಾಳಿ, ಬೆಳಕು ಸೇರಿದಂತೆ ಮೂಲ ಸೌಲಭ್ಯ ಒದಗಿಸಬೇಕು. ಅಕ್ರಮ ತಡೆಗೆ ಪೊಲೀಸ್ ಸಹಯೋಗ ಪಡೆಯಲಾಗುವುದು. ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗುವುದು ಎಂದು ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಡಿಡಿಪಿಯು ಕೃಷ್ಣಪ್ಪ, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ ಮುಂತಾದವರುಸ ಭೆಯಲ್ಲಿ ಪಾಲ್ಗೊಂಡಿದ್ದರು.ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts