More

    ಡಿಕೆಶಿ ವಿರುದ್ಧದ ಆದಾಯಕ್ಕಿಂತ ಹೆಚ್ಚಿನ ಅಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್‌ನಲ್ಲಿ ಸಿಬಿಐ ಪರ ವಕೀಲರಿಂದ ವಾದ ಮಂಡನೆ

    ಬೆಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಕಾನೂನಿಗೆ ವಿರುದ್ಧವಾಗಿದೆ. ಸಿಬಿಐ ತನಿಖೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು ಎಂದು ಸಿಬಿಐ ಪರ ವಕೀಲರು ಹೈಕೋರ್ಟ್ ಗಮನಕ್ಕೆ ತಂದರು.

    ತನಿಖೆ ಅನುಮತಿ ಆದೇಶ ರದ್ದು ಕೋರಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠ ಬುಧವಾರ ನಡೆಸಿತು.

    ಸಿಬಿಐ ಪರ ವಾದ ಮಂಡಿಸಿದ ಸಹಾಯಕ ಸಾಲಿಸಿಟರಿ ಜನರಲ್ ಎಸ್. ವಿ ರಾಜು, ತನಿಖೆಗೆ ನೀಡಿದ್ದ ಸಮ್ಮತಿಯನ್ನು ಸರ್ಕಾರ ಹಿಂಪಡೆದಿದೆ. ಇದು ಕಾನೂನಿಗೆ ವಿರುದ್ಧವಾದ ನಡೆ. ಹೀಗಾಗಿ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು. ಪ್ರಮುಖ ಪ್ರಕರಣದಲ್ಲಿ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ.

    ವಿಚಾರಣೆಯನ್ನು ಮಾರ್ಚ್ ಮೊದಲ ಅಥವಾ 2ನೇ ವಾರದಲ್ಲಿ ಆಲಿಸಬೇಕು. ಅದಕ್ಕಾಗಿ ದಿನಾಂಕ ನಿಗದಿಪಡಿಸಬೇಕು. ತುರ್ತಾಗಿ ಅರ್ಜಿ ವಿಚಾರಣೆ ನಡೆಸುವಂತೆ ಪೀಠಕ್ಕೆ ಮನವಿ ಮಾಡಿದರು.

    ಖುದ್ದು ಹಾಜರಿದ್ದ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಆ ಸಮಯದಲ್ಲಿ ತಮಗೆ ಬೇರೆ ಪ್ರಕರಣಗಳ ವಿಚಾರಣೆ ಇದೆ ಎಂದು ಪೀಠದ ಗಮನಕ್ಕೆ ತಂದರು.

    ಆಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೋಮಶೇಖರ್ ಅವರು, ಈ ವಿಭಾಗೀಯ ಪೀಠದ ಮತ್ತೋರ್ವ ನ್ಯಾಯಮೂರ್ತಿ ಅಡಿಗ ಅವರು ಧಾರವಾಡ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದ ವಿಚಾರಣೆಗೆ ಅವರು ಭೌತಿಕವಾಗಿ ಪ್ರಧಾನ ಪೀಠಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾ.22ಕ್ಕೆ ಮುಂದೂಡಲಾಗುತ್ತಿದೆ. ಅಂದು ನ್ಯಾಯಾಲಯವು ಬೆಳಿಗ್ಗೆ 10.20ರಿಂದ ಸಂಜೆ 4.30ರ ಪ್ರಕರಣದ ವಿಚಾರಣೆ ಆಲಿಸಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts