ಎಕ್ಸಲೆಂಟ್ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Mbd_Shreyas
Published on

ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಶ್ರೇಯಸ್ ಸಿ.ಲಿಂಗರಾಜು ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಮೈಸೂರಿನ ಲಿಂಗರಾಜು, ಲತಾ ದಂಪತಿಯ ಪುತ್ರ. ವಿದ್ಯಾರ್ಥಿಯನ್ನು ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net