ಬೆಂಗಳೂರು: ರಾಜ್ಯದ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ತುಸು ಕ್ಷೀಣವಾಗಿದೆ. ಶಿವಮೊಗ್ಗದ ಆಗುಂಬೆ, ಚಿಕ್ಕಮಗಳೂರಿನ ಮೂಡಗೆರೆ, ಕೊಡಗಿನ ಗೋಣಿಕೊಪ್ಪದಲ್ಲಿ ಶನಿವಾರ ಧಾರಾಕಾರವಾಗಿ ಮಳೆಯಾಗಿದೆ.
ದಕ್ಷಿಣ ಗುಜರಾತ್ ಮೂಲಕ ಮಧ್ಯ ಕೇರಳದ ಕರಾವಳಿವರೆಗೆ ತೇವಾಂಶ ಭರಿತ ಮೋಡಗಳು ಹಾದುಹೋಗಿರುವುದು, ಕರ್ನಾಟಕದ ಕರಾವಳಿ ಭಾಗ ಮತ್ತು ಪಶ್ಚಿಮಟ್ಟ ಭಾಗಗಳಲ್ಲಿ ಗಾಳಿ ಬೀಸುತ್ತಿರುವ ಪರಿಣಾಮದಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅರ್ಲಟ್ ಕೊಟ್ಟಿದೆ. ಆ.6ರಿಂದ ಆ.7 ರವರೆಗೆ ಮೇಲಿನ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲಟ್ ಇರಲಿದೆ. ಪ್ರತಿ ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರ ದಡದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸಲಹೆ ನೀಡಿದೆ.
ಕಾಂಗ್ರೆಸ್ ಲಿಂಗಾಯತ MLA ಗಳು ಸಿಎಂ ಜತೆಗಿದ್ದಾರೆ: ಬಸವರಾಜ ರಾಯರೆಡ್ಡಿ
ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆ.4ರಂದು ಯೆಲ್ಲೋ ಅರ್ಲಟ್ ನೀಡಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮಳೆ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ. ಇರಲಿದೆ.