More

    ಮದ್ಯನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 8 ರವರೆಗೆ ವಿಸ್ತರಣೆ!

    ನವದೆಹಲಿ: ದಿಲ್ಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ, ಮತ್ತೊಬ್ಬ ಆರೋಪಿ ವಿಜಯ್ ನಾಯರ್ ಮತ್ತು ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ಕೋರ್ಟ್​ ಮೇ 8 ರವರೆಗೆ ವಿಸ್ತರಿಸಿದೆ.

    ಇದನ್ನೂ ಓದಿ: ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ಸ್ಫೋಟ, ಎನ್​ಐಎ ತನಿಖೆಗೆ ಕೋರ್ಟ್​ ಆದೇಶ 

    ಈ ಹಿಂದೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಆರೋಪಿಗಳನ್ನು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿತ್ತು. ಚಾರ್ಜ್ ಶೀಟ್‌ಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸೂಚಿಸಿದ್ದಾರೆ.

    ವಿಚಾರಣೆಯ ಸಂದರ್ಭದಲ್ಲಿ, ಇಡಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ನವೀನ್ ಕುಮಾರ್ ಮಟ್ಟಾ ಮತ್ತು ಸೈಮನ್ ಬೆಂಜಮಿನ್ ಅವರು ಆರೋಪಿಗಳು ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದಾರೆ ಮತ್ತು ಅವರು ವಿಚಾರಣೆಯನ್ನು ತ್ವರಿತಗೊಳಿಸಲು ಸಿದ್ಧರಿಲ್ಲ ಎಂದು ಆರೋಪಿಸಿದ್ದಾರೆ.

    ಇದಕ್ಕೂ ಮೊದಲು, ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಮೇ 7 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶ ಮಾಡಿತ್ತು.

    ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts